ಟಿಪ್ಪು ಚರಿತ್ರೆಯನ್ನು ಪಠ್ಯಕ್ರಮದಿಂದ ತೆಗೆದಿರುವುದು ಖಂಡನೀಯ : ಡಿಕೆಶಿ

0
278
Tap to know MORE!

ಬೆಂಗಳೂರು:  ಟಿಪ್ಪು ಜಯಂತಿ ಆಚರಿಸುವುದು, ಬಿಡುವುದು ರಾಜ್ಯ ಸರ್ಕಾರಕ್ಕೆ ಬಿಟ್ಟ ವಿಚಾರ. ಆದರೆ, ಟಿಪ್ಪು ಸುಲ್ತಾನ್ ಹೆಸರಿಲ್ಲದೆ ಈ ದೇಶದ ಇತಿಹಾಸ ಅಪೂರ್ಣ ಎನ್ನುವುದು ವಾಸ್ತವ. ಅವರ ಚರಿತ್ರೆಯನ್ನು ಪಠ್ಯಪುಸ್ತಕದಿಂದ ಕೈಬಿಟ್ಟಿರುವುದು ಸರ್ಕಾರದ ದೊಡ್ಡ ತಪ್ಪು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶದ ರಾಷ್ಟ್ರಪತಿಯವರೇ ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ಟಿಪ್ಪು ಅವರ ಚರಿತ್ರೆ, ತ್ಯಾಗ, ದೇಶ ಭಕ್ತಿಯ ಬಗ್ಗೆ ಹಾಡಿ ಹೊಗಳಿರುವುದೇ ಇದಕ್ಕೆ ನಿದರ್ಶನ ಎಂದರು.

ಈ ಸಂಬಂಧ ಮಾತನಾಡಿರುವ ಡಿಕೆಶಿ, ಪಠ್ಯಪುಸ್ತಕದಿಂದ ಕೈ ಬಿಟ್ಟ ವಿಚಾರ ಸಂಬಂಧ ಸಂಶೋಧಕರು, ಶಿಕ್ಷಣ ತಜ್ಞರೊಂದಿಗೂ ಚರ್ಚಿಸಲಾಗುವುದು. ಇತಿಹಾಸ ತಿರುಚುವ ಮೂಲಕ ಜನರ ದಾರಿ ತಪ್ಪಿಸುತ್ತಿರುವುದನ್ನು ವಿರೋಧಿಸಬೇಕಿದೆ. ಯಾವುದೇ ಕಾರಣಕ್ಕೂ ಇತಿಹಾಸ ಮರೆಮಾಚಲು ಬಿಡುವುದಿಲ್ಲ ಎಂದು ಆಗ್ರಹಿಸಿದ್ದಾರೆ.

ದೇಶದ ಇತಿಹಾಸದಲ್ಲಿ ದಾಖಲಾದ ವಿಚಾರವನ್ನ ಬಿಎಸ್‍ವೈ ಸರ್ಕಾರ ಶಾಲಾ ಪಠ್ಯಗಳಿಂದ ಕೈಬಿಡಲು ಹೊರಟಿರುವುದು ಖಂಡನೀಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಟಿಪ್ಪು ಸುಲ್ತಾನ್ ಇತಿಹಾಸ ಒಂದು ಧರ್ಮ, ವರ್ಗಕ್ಕೆ ಸೇರಿದ್ದಲ್ಲ, ಬದಲಾಗಿ ದೇಶದ ಚರಿತ್ರೆಗೆ ಸಂಬಂಧಿಸಿದ್ದು. ಬ್ರಿಟಿಷ್ ಇತಿಹಾಸದಲ್ಲಿಯೂ ದಾಖಲಾಗಿರುವಂಥದ್ದು. ಮಕ್ಕಳಲ್ಲಿ ಇತಿಹಾಸದ ತಿಳುವಳಿಕೆ ಕಡಿಮೆ ಆಗುತ್ತಿರುವ ಕಾಲದಲ್ಲಿ ಬಿಎಸ್‍ವೈ ಸರ್ಕಾರದ ಇಂತಹ ತೀರ್ಮಾನ ಸಮರ್ಥನೀಯವಲ್ಲ. ಹಾಗಾಗಿ ಇದನ್ನು ನಮ್ಮ ಪಕ್ಷ ವಿರೋಧಿಸಲಿದೆ ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಕೊರೊನಾ ಹಿನ್ನೆಲೆಯಲ್ಲಿ ಶಾಲಾ ಅವಧಿಯನ್ನು ಕಡಿತಗೊಳಿಸಿ, ಶೇ.30ರಷ್ಟು ಪಠ್ಯಗಳನ್ನ ಕಡಿತ ಮಾಡಲು ಸರ್ಕಾರ ಮುಂದಾಗಿದೆ. ಹೀಗಾಗಿ ಒಂದರಿಂದ 10ನೇ ತರಗತಿವರೆಗೆ ಯಾವುದೇ ಪಾಠ ಅಥವಾ ಪಠ್ಯ ಪುನರಾವರ್ತನೆ ಆಗದಂತೆ ನೋಡಿಕೊಳ್ಳಲು ಮತ್ತು ಮಹತ್ವದಲ್ಲದ ಪಾಠಗಳನ್ನು ಪಠ್ಯದಿಂದ ತೆಗೆಯಲು ಶಿಕ್ಷಣ ಇಲಾಖೆ ಈ ನಿರ್ಧಾರವನ್ನು ಕೈಗೊಂಡಿದೆ. 7ನೇ ತರಗತಿಯ ಪುಸ್ತಕದಿಂದ ಟಿಪ್ಪು ಪಾಠವನ್ನು ಕೈಬಿಟ್ಟರೂ, 6 ಮತ್ತು 10ನೇ ತರಗತಿಯಲ್ಲಿ ಅದನ್ನು ಉಳಿಸಿಕೊಳ್ಳಲಾಗಿದೆ.

LEAVE A REPLY

Please enter your comment!
Please enter your name here