FLASH| ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ಸ್ | ಭಾರತದ ಪ್ಲೇಯಿಂಗ್ 11 ಪ್ರಕಟಿಸಿದ ಬಿಸಿಸಿಐ

0
138
Tap to know MORE!

ನ್ಯೂಜಿಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2021 ಫೈನಲ್ ಕಾದಾಟಕ್ಕೆ ಭಾರತ ತಂಡದ ಆಡುವ ಬಳಗವನ್ನು ಬಿಸಿಸಿಐ ಬುಧವಾರ ಪ್ರಕಟಿಸಿದೆ. ನಿರೀಕ್ಷೆಯಂತೆ, ತಂಡವು ಮೂವರು ವೇಗಿಗಳಾದ ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ಮತ್ತು ಇಬ್ಬರು ಸ್ಪಿನ್ನರ್ಗಳಾದ ಆರ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಅವರ ಸಂಯೋಜನೆಯಲ್ಲಿ ಆಡಲಿದೆ.

ಬ್ಯಾಟಿಂಗ್ ವಿಭಾಗದಿಂದಲೂ ಯಾವುದೇ ಆಶ್ಚರ್ಯಗಳಿಲ್ಲ. ರೋಹಿತ್ ಶರ್ಮಾ ಮತ್ತು ಶುಬ್ಮನ್ ಗಿಲ್ ಆರಂಭಿಕ ಆಟಗಾರರಾಗಿ, ನಂತರ ಸ್ಥಾನದಲ್ಲಿ ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ ಮತ್ತು ಅಜಿಂಕ್ಯ ರಹಾನೆ ಆಡಲಿದ್ದಾರೆ. ವೃದ್ಧಿಮಾನ್ ಸಹಾರನ್ನು ಕೈಬಿಟ್ಟು, ವಿಕೆಟ್ ಕೀಪರ್ ಆಗಿ ರಿಷಭ್ ಪಂತ್ ಅವರನ್ನು ಆಯ್ಕೆ ಮಾಡಲಾಗಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಆಡುವ ಬಳಗ: ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರೋಹಿತ್ ಶರ್ಮಾ, ಶುಭಮಾನ್ ಗಿಲ್, ಚೇತೇಶ್ವರ ಪೂಜಾರ,ರಿಷಭ್ ಪಂತ್, ಆರ್ ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ

LEAVE A REPLY

Please enter your comment!
Please enter your name here