ರಾಜ್ಯದಲ್ಲಿ ಕೊರೋನಾ ರಣಕೇಕೆ ಮುಂದುವರೆದಿದ್ದು, ಯಾರನ್ನೂ ಬಿಡುತ್ತಿಲ್ಲ. ರಾಜಕಾರಣಿಗಳ ಬಳಿಕ ಇದೀಗ ಸ್ಯಾಂಡಲ್ವುಡ್ ನವರಿಗೆ ಕೊರೋನಾ ಅಂಟಿಕೊಂಡಿದೆ. ಕಳೆದ ವಾರವಷ್ಟೇ ಒಬ್ಬ ನಿರ್ಮಾಪಕರಲ್ಲಿ ಕೊರೋನಾ ಕಂಡಿದ್ದು, ಇದೀಗ ಡಕೋಟ ಎಕ್ಸ್ಪ್ರೆಸ್ ಖ್ಯಾತಿಯ ರಾಕ್ ಲೈನ್ ವೆಂಕಟೇಶ್ ಗೆ ಕೊರೋನಾ ಇರುವುದು ದೃಢಪಟ್ಟಿದೆ.
ಕೆಲ ದಿನಗಳ ಹಿಂದೆಯಷ್ಟೇ, ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗೆ ಕೊರೋನಾ ಸೋಂಕು ತಗುಲಿದ್ದು, ಅವರ ನಿಕಟವರ್ತಿಯಾಗಿರುವ ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರಿಗೂ ಕೊರೊನಾ ಸೋಂಕು ತಗುಲಿರುವುದು, ಮತ್ತಷ್ಟು ಸಂಪರ್ಕಿತರಲ್ಲಿ ಭೀತಿ ಹುಟ್ಟಿಸಿದೆ.
ರಾಕ್ ಲೈನ್ ವೆಂಕಟೇಶ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಲತಾ ಅಂಬರೀಶ್ ಅವರಿಗೆ ಸೋಮವಾರ ಕೊರೋನಾ ಸೋಂಕು ತಗುಲಿರುವ ವರದಿ ಬಂದ ನಂತರ ರಾಕ್ ಲೈನ್ ವೆಂಕಟೇಶ್ ಅವರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ಬಂದ ವರದಿಯಲ್ಲಿ, ಅವರಿಗೂ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಸೋಂಕು ತಗುಲಿರುವುದು ಧೃಢಪಟ್ಟ ಹಿನ್ನೆಲೆಯಲ್ಲಿ ರಾಕ್ ಲೈನ್ ವೆಂಕಟೇಶ್ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ.