ಬೆಂಗಳೂರು, ಜ.6: ರಾಜ್ಯದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮಿಷನ್-150 ಗುರಿ ಇಟ್ಟುಕೊಂಡಿರುವ ಕಾಂಗ್ರೆಸ್ ಪಕ್ಷ, ಅದನ್ನು ಸಾಧಿಸಲು ಪಕ್ಷವನ್ನು ನಾಯಕತ್ವ ಆಧಾರಿತ ಪಕ್ಷದಿಂದ ಕೇಡರ್ ಬೇಸ್ಡ್ ಪಕ್ಷವಾಗಿ ಪರಿವರ್ತಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದಿನಿಂದ ಕಾರ್ಯಾಚರಣೆ ಆರಂಭಿಸಿದ್ದಾರೆ.
150 ಸ್ಥಾನಗಳನ್ನು ಗೆದ್ದು ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿಯುವ ಧ್ಯೇಯೋದ್ದೇಶ ಹೊಂದಿರುವ ಕಾಂಗ್ರೆಸ್ ಅದಕ್ಕಾಗಿ ಗೆಲುವು ಸಾಧ್ಯವಿರುವ ಸಂಭನೀಯ ಕ್ಷೇತ್ರಗಳನ್ನು ಗುರುತಿಸಿದ್ದು, ಅಲ್ಲಿ ಇಂದಿನಿಂದ ಚುರುಕು ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.
ಇದನ್ನೂ ಓದಿ: ವಿಧಾನಸಭೆ, ಪರಿಷತ್ ಒಳಗೂ ಕಾಂಗ್ರೆಸ್ ಗೂಂಡಾಗಿರಿ : ನಳಿನ್ ಕುಮಾರ್
ಕೆಪಿಸಿಸಿ ಅಧ್ಯಕ್ಷರು ಕಾರ್ಯಕರ್ತರ ದನಿಯಾಗಬೇಕೇ ಹೊರತು ಅಧ್ಯಕ್ಷರ ವಿಚಾರಗಳನ್ನು ಕಾರ್ಯಕರ್ತರ ಮೇಲೆ ಹೇರಬಾರದು. ಈ ನಿಟ್ಟಿನಲ್ಲಿ ನಾನು ಕಾರ್ಯಕರ್ತರ ಅಭಿಪ್ರಾಯ ಕೇಳಿ ಅವರ ನಿಲುವುಗಳಂತೆಯೇ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಡಿಕೆಶಿ ಹೇಳಿದರು. ಕೆಪಿಸಿಸಿ ಅಧ್ಯಕ್ಷನಾಗಿ ಪ್ರತಿಜ್ಞಾವಿದಿ ಸ್ವೀಕರಿಸಿದ ದಿನವೇ ಕಾಂಗ್ರೆಸನ್ನು ಕೇಡರ್ ಪಕ್ಷವಾಗಿ ಪರಿವರ್ತಿಸುವುದಾಗಿ ಘೋಷಣೆ ಮಾಡಿದ್ದೆ. ಅದಕ್ಕೆ ಇಂದಿನಿಂದಲೇ ಚಾಲನೆ ನೀಡಿದ್ದೇನೆ ಎಂದರು.
ಸುದ್ದಿಗಳನ್ನು ವಾಟ್ಸಾಪ್ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ
ಇಂದು ಮಂಗಳೂರಿನ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ, ಮೊದಲ ಸಭೆ ನಡೆದಿದೆ. ಮೈಸೂರು ಕಂದಾಯ ವಿಭಾಗದ ಜಿಲ್ಲಾಧ್ಯಕ್ಷರು, ಶಾಸಕರು, ವಿಧಾನಪರಿಷತ್ ಸದಸ್ಯರು, ಪಕ್ಷದ ಪದಾಧಿಕಾರಿಗಳು, ಕಳೆದ ಚುನಾವಣೆಯಲ್ಲಿ ಸೋಲು ಕಂಡವರು ಸಭೆಯಲ್ಲಿ ಭಾಗವಹಿಸಿದ್ದರು. ಸ್ಥಳೀಯ ನಾಯಕರ ಅಭಿಪ್ರಾಯ ಕೇಳಿದ ಬಳಿಕ ಅದನ್ನು ಆಧರಿಸಿ ಮುಂದಿನ ರಾಜಕೀಯ ರಣತಂತ್ರ ರೂಪಿಸುವುದಾಗಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
BREAKING| ದೇಶಾದ್ಯಂತ ಎಲ್ಲರಿಗೂ ಕೊರೋನಾ ಲಸಿಕೆ ಉಚಿತ: ಕೇಂದ್ರ ಸರ್ಕಾರ ಘೋಷಣೆ