ಡಿಜಿಟಲ್‌ ಗ್ರಂಥಾಲಯ – ಲಕ್ಷಕ್ಕೂ ಅಧಿಕ ಪುಸ್ತಕಗಳು ಒಂದೇ ಸೂರಿನಡಿ ಲಭ್ಯ!

0
220
ಡಿಜಿಟಲ್‌ ಲೈಬ್ರೆರಿ
Tap to know MORE!

ಬೆಂಗಳೂರು, ನ. 06: ಪುಸ್ತಕ ಪ್ರೇಮಿಗಳಿಗಾಗಿ ಸಾರ್ವಜನಿಕ ಗ್ರಂಥಾಲಯವು ಡಿಜಿಟಲ್‌ ಗ್ರಂಥಾಲಯವನ್ನು ಆರಂಭ ಮಾಡಿದೆ. ನೋಂದಣಿ ಮಾಡಿಕೊಳ್ಳುವ ಮೂಲಕ ಪುಸ್ತಕ, ಸಂಶೋಧನಾ ವರದಿ ಮುಂತಾದವುಗಳನ್ನು ಜನರು ಓದಲು ಅವಕಾಶ ನೀಡಲಾಗಿದೆ.

ಸಾರ್ವಜನಿಕ ಗ್ರಂಥಾಲಯವು ಓದುಗರ ಅನುಕೂಲಕ್ಕಾಗಿ ಡಿಜಿಟಲ್ ಗ್ರಂಥಾಲಯವನ್ನು ಆರಂಭಿಸಿದೆ. ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಮುಖ್ಯ ಗ್ರಂಥಾಲಯದ ಅಧಿಕಾರಿಗಳು ಕರೆ ನೀಡಿದ್ದಾರೆ.

ಸಾರ್ವಜನಿಕ ಗ್ರಂಥಾಲಯ ಅಭಿವೃದ್ಧಿ ಪಡಿಸಿರುವ e-Sarvajanika Grantalaya (ಇ-ಸಾರ್ವಜನಿಕ ಗ್ರಂಥಾಲಯ) ಮೊಬೈಲ್ ಅಪ್ಲಿಕೇಶನ್ ಹಾಗೂ ಜಾಲತಾಣದ ಮೂಲಕ ಪುಸ್ತಕಗಳನ್ನು ಓದಬಹುದಾಗಿದೆ.

ಮೊಬೈಲ್ ಅಪ್ಲಿಕೇಶನ್ ಡೌನ್ ಲೋಡ್ ಮಾಡಿಕೊಂಡು, ವೆಬ್ ಸೈಟ್‌ಗೆ ಭೇಟಿ ನೀಡಿ ಡಿಜಿಟಲ್ ಗ್ರಂಥಾಲಯದ ಸದಸ್ಯತ್ವವನ್ನು ಪಡೆದುಕೊಳ್ಳಬೇಕು. ಮೊಬೈಲ್, ಕಂಪ್ಯೂಟರ್, ಲ್ಯಾಪ್‍ ಟಾಪ್, ಟ್ಯಾಬ್ ಮೂಲಕ ಪುಸ್ತಕಗಳನ್ನು ಉಚಿತವಾಗಿ ಓದಬಹುದಾಗಿದೆ.

ಡಿಜಿಟಲ್ ಗ್ರಂಥಾಲಯದಲ್ಲಿ 1 ಲಕ್ಷಕ್ಕೂ ಹೆಚ್ಚು ಇ-ಪುಸ್ತಕ, ಸ್ಪರ್ಧಾತ್ಮಕ ಪರೀಕ್ಷೆ ಪುಸ್ತಕಗಳು, ಸಿಇಟಿ, ನೀಟ್, ಯುಪಿಎಸ್‌ಸಿ, ಕೆಪಿಎಸ್‌ಸಿ ಪರೀಕ್ಷೆಗೆ ಸಂಬಂಧಿಸಿದ ಪುಸ್ತಕಗಳಿವೆ. ಸಿಬಿಎಸ್‌ಸಿ, ಐಸಿಎಸ್‌ಇ, ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳು ಸಹ ಇವೆ.

ವಿವಿಧ ಭಾಷೆಗಳ ಪ್ರಾದೇಶಿಕ, ರಾಷ್ಟ್ರೀಯ ದಿನಪತ್ರಿಕೆಗಳು ಹಾಗೂ ನಿಯತಕಾಲಿಕೆಗಳು ಲಭ್ಯವಿರುತ್ತದೆ. ಒಮ್ಮೆ ನೋಂದಣಿ ಮಾಡಿಕೊಂಡರೆ ಉಚಿತವಾಗಿ ಪುಸ್ತಕಗಳನ್ನು ಓದಬಹುದಾಗಿದೆ.

LEAVE A REPLY

Please enter your comment!
Please enter your name here