ಡಿಕೆಶಿ ಸಹೋದರ, ಸಂಸದ ಡಿ.ಕೆ.ಸುರೇಶ್‌ಗೆ ಕೊರೋನಾ – ಸಿಬಿಐ ಅಧಿಕಾರಿಗಳಿಗೆ ಆತಂಕ!

0
171
Tap to know MORE!

ಸಂಸದ ಡಿ.ಕೆ.ಸುರೇಶ್ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದಾಗಿ ಕಳೆದ ಎರಡು ದಿನಗಳಿಂದ ಇವರೊಂದಿಗೆ ಇದ್ದ ಹಲವಾರು ಸಿಬಿಐ ಅಧಿಕಾರಿಗಳಿಗೂ ಈಗ ಆತಂಕ ಎದುರಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕೋವಿಡ್-19 ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ ಎಂದಿದ್ದಾರೆ.

ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ ಸಿಬಿಐ ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here