ತಮ್ಮನಿಗೆ ಕೊರೊನಾ.. ಅಣ್ಣ ನೇಣಿಗೆ ಶರಣು..!!

0
183
Tap to know MORE!

ಕೋಲಾರ: ಸಹೋದರನಿಗೆ ಕೊರೊನಾ ಸೋಂಕು ತಗಲಿದ ವಿಚಾರ ತಿಳಿಯುತ್ತಲೇ ಭಯಗೊಂಡ ಅಣ್ಣನೊಬ್ಬ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದ ಗಾಂಧಿನಗರದಲ್ಲಿ ನಡೆದಿದೆ.

ಶನಿವಾರ ರಾತ್ರಿ ನಾಗರಾಜ್ (37) ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂಲಿ ಕೆಲಸ ಮಾಡಿಕೊಂಡಿದ್ದ ನಾಗರಾಜ್ ತಮ್ಮನಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು.

ಸೋಂಕಿತನನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ನಾಗರಾಜ್ ಮಾತ್ರ ಅನಾವಶ್ಯವಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಕೊರೊನಾ ತಗುಲಿರುವ ತಮ್ಮನೊಡನೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಕಾರಣ ತನಗೂ ಸಹ ಸೋಂಕು ತಗುಲಿರಬಹುದೆಂದು ಭಯಗೊಂಡು ನಾಗರಾಜ್ ಈ ಕೃತ್ಯ ಎಸಗಿದ್ದಾರೆ ಎಂದು ಅವರ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಘಟನೆಗೆ ಸಂಬಂಧಿಸಿ ಗಲ್ ಪೇಟೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here