ತಲಕಾವೇರಿ: ಬ್ರಹ್ಮಗಿರಿ ಬೆಟ್ಟ ಕುಸಿದು ಐವರು ಮೃತಪಟ್ಟ ತಲಕಾವೇರಿ ಪ್ರದೇಶದಲ್ಲಿ ಕಳೆದ 17 ದಿನಗಳಿಂದ ಕಾರ್ಯಾಚರಣೆ ನಡೆಸಿದರೂ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಆಚಾರ್ ಅವರ ಪತ್ನಿ ಶಾಂತಾ ಆಚಾರ್ ಹಾಗೂ ಸಹಾಯಕ ಅರ್ಚಕ ಶ್ರೀನಿವಾಸ ಅವರ ಮೃತದೇಹ ಪತ್ತೆಯಾಗದಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಶೋಧ ಕಾರ್ಯದ ಕಾರ್ಯವನ್ನು ಸ್ಥಗಿತಗೊಳಿಸಿದೆ.
ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಲು ನಿರ್ಧರಿಸಿದೆ. ಕಳೆದ ಬಾರಿ ಜೋಡುಪಾಲ ದುರಂತದಲ್ಲೂ ಕೊನೆಗೆ ಇದೆ ನಿರ್ಧಾರ ಮಾಡಲಾಗಿತ್ತು.