ತಿರುಪತಿ: ಕೋವಿಡ್-19 ನಿಯಮಗಳು ಇನ್ನಷ್ಟು ಸಡಿಲ – ದೇವರ ದರ್ಶನಕ್ಕೆ ಎಲ್ಲರಿಗೂ ಅವಕಾಶ

0
174
Tap to know MORE!

ತಿರುಮಲ: ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಸಮಿತಿ ಕೋವಿಡ್‌ -19 ನಿರ್ಬಂಧಗಳನ್ನು ಸಡಿಲಿಸಿದ್ದು, 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ, 65 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು ಗರ್ಭಿಣಿ ಮಹಿಳೆಯರಿಗೆ ವೆಂಕಟೇಶ್ವರನ ದರ್ಶನಕ್ಕೆ ಅವಕಾಶ ನೀಡಲು ನಿರ್ಧರಿಸಿದೆ. ಕಳೆದ ಜೂನ್‌ನಿಂದ ತಿಮ್ಮಪ್ಪನ ದರ್ಶನಕ್ಕೆ ಭಕ್ತರಿಗೆ ಅವಕಾಶ ಮಾಡಿಕೊಡಲಾಗಿತ್ತಾದರೂ ಮಕ್ಕಳು, ವೃದ್ಧರು ಮತ್ತು ಗರ್ಭಿಣಿ ಮಹಿಳೆಯರಿಗೆ ನಿರ್ಬಂಧ ವಿಧಿಸಲಾಗಿತ್ತು.

ಕೊರೊನಾ ಸೋಂಕು ಹಾವಳಿ ಸ್ಫೋಟದ ಬಳಿಕ ಮಾರ್ಚ್‌ 20ರಿಂದ ಭಕ್ತರ ದರ್ಶನಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿತ್ತು. ಬಳಿಕ, ಸಾರ್ವಜನಿಕರ ಬಲವಂತಕ್ಕೆ ಮಣಿದು ಕಳೆದ ಜೂನ್‌ನಿಂದ ಸೀಮಿತ ಸಂಖ್ಯೆಯ ಭಕ್ತರಿಗೆ ಅವಕಾಶ ನೀಡಲಾಗಿತ್ತು. ಮಕ್ಕಳಿಗೆ, ವೃದ್ಧರಿಗೆ ಮತ್ತು ಗರ್ಭಿಣಿಯರಿಗೆ ದರ್ಶನ ಪಡೆಯಲು ಇದುವರೆಗೂ ಅವಕಾಶ ನೀಡಿರಲಿಲ್ಲ.

ಇದನ್ನೂ ಓದಿ: ಪಿಎಂ-ವಾಣಿ | ಸಾರ್ವಜನಿಕ ವೈ-ಫೈ ಕೇಂದ್ರಗಳನ್ನು ಸ್ಥಾಪಿಸಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ

ಈ ಬಗ್ಗೆ ಲಕ್ಷಾಂತರ ಇ-ಮೇಲ್‌ಗಳು ಬಂದಿದ್ದು, ದರ್ಶನಕ್ಕೆ ಎಲ್ಲರಿಗೂ ಮುಕ್ತ ಅವಕಾಶ ನೀಡಬೇಕು ಎಂದು ಒತ್ತಾಯಿಸಲಾಗಿತ್ತು. ಫೋನ್‌ ಕರೆ ಕಾರ್ಯಕ್ರಮಗಳಲ್ಲೂ ಇಂತಹದ್ದೇ ಬೇಡಿಕೆ ಜನರಿಂದ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೋವಿಡ್‌ ನಿರ್ಬಂಧಗಳನ್ನು ಸಡಿಲಿಸಲಾಗಿದೆ ಎಂದು ಟಿಟಿಡಿ ಮೂಲಗಳು ತಿಳಿಸಿವೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಸಾಮಾನ್ಯವಾಗಿ ದೇವಸ್ಥಾನದಲ್ಲಿ ಮಕ್ಕಳಿಗೆ ಕಿವಿ ಚುಚ್ಚುವ ಕಾರ್ಯಕ್ರಮ, ಅನ್ನಪ್ರಾಶನ, ಮುಡಿ ತೆಗೆಸುವಂತಹ ಕಾರ್ಯಕ್ರಮಗಳು ನಡೆಯುತ್ತವೆ. ವೃದ್ಧರು ಷಷ್ಠಿಪುರ್ತಿ, ಶಾಂತಿ ಪೂಜೆ ಮತ್ತಿತರೆ ಕಾರ್ಯಕ್ರಮಗಳನ್ನು ನೆರವೇರಿಸುತ್ತಾರೆ. ಈ ಎಲ್ಲಾ ಕಾರ್ಯಕ್ರಮಗಳಿಗೂ ಇನ್ನು ಮುಂದೆ ಅವಕಾಶ ನೀಡಲಾಗುವುದು. ಆದರೆ ಕೋವಿಡ್‌ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗುತ್ತದೆ ಎಂದು ಸಮಿತಿ ತಿಳಿಸಿದೆ.

80 ಕೆಜಿ ಭಾರ ಎತ್ತಿ ದಾಖಲೆ ಬರೆದ 7 ವರ್ಷದ ಬಾಲಕಿ!

LEAVE A REPLY

Please enter your comment!
Please enter your name here