ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷಾ ಸ್ಥಾನಮಾನವನ್ನು ನೀಡುವಂತೆ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ ಜನಪ್ರತಿನಿಧಿಗಳು!

1
246
Tap to know MORE!

ಬೆಂಗಳೂರು : ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷಾ ಸ್ಥಾನಮಾನವನ್ನು ಕೋರಿ, ಕರಾವಳಿ ಕರ್ನಾಟಕದ ಜನಪ್ರತಿನಿಧಿಗಳ ನಿಯೋಗವು ಮುಖ್ಯಮಂತ್ರಿ ಬಿ ಎಸ್ ಯಡಿಯುರಪ್ಪ ಅವರನ್ನು ಭೇಟಿಯಾಗಿ ಜ್ಞಾಪಕ ಪತ್ರವನ್ನು ಹಸ್ತಾಂತರಿಸಿತು.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಮಂಗಳೂರು (ಉತ್ತರ) ಶಾಸಕ ಡಾ.ಭಾರತ್ ಶೆಟ್ಟಿ, ಪುತ್ತೂರು ಶಾಸಕ ಸಂಜೀವ ಮಠಂದೂರು, ಎಂಎಲ್‌ಸಿಗಳಾದ ಪ್ರತಾಪ್ ಸಿಂಹ ನಾಯಕ್ ಮತ್ತು ಶಾಂತಾರಾಮ್ ಸಿದ್ದಿ ಉಪಸ್ಥಿತರಿದ್ದರು.

ಇದನ್ನೂ ಓದಿ : ಮುಖ್ಯಮಂತ್ರಿಯನ್ನು ಭೇಟಿಯಾದ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರು

ಸಂವಿಧಾನದ 345-ಬಿ ಕಲಂ ಅಡಿಯಲ್ಲಿ ಹೆಚ್ಚಿನ ರಾಜ್ಯಗಳು ಆಯಾ ರಾಜ್ಯಗಳಲ್ಲಿ ಉತ್ತಮ ಸಾಂಸ್ಕೃತಿಕ ಹಿನ್ನೆಲೆ ಹೊಂದಿರುವ ಭಾಷೆಗಳನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಘೋಷಿಸಿವೆ ಎಂದು ಜ್ಞಾಪಕ ಪತ್ರದಲ್ಲಿ ಉಲ್ಲೇಖಿಸಲಾಗಿದೆ. 2011 ರ ಜನಗಣತಿಯ ಪ್ರಕಾರ, ಸುಮಾರು 18.05 ಲಕ್ಷ ಜನರು ತುಳು ಭಾಷೆಯನ್ನು ಅಧಿಕೃತ ಸಂವಹನ ಮಾಧ್ಯಮವಾಗಿ ಬಳಸುತ್ತಾರೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ : ತುಳುವಿನಲ್ಲಿ ಸಿಗಲಿ ಮಾತೃಭಾಷಾ ಶಿಕ್ಷಣ

ಕರ್ನಾಟಕ ತುಳು ಅಕಾಡೆಮಿ, ತುಳು ಸಂಸ್ಥೆಗಳು ಮತ್ತು ಇತರ ಸಂಸ್ಥೆಗಳ ಅಂದಾಜಿನ ಪ್ರಕಾರ, ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಒಟ್ಟು 40 ಲಕ್ಷ ತುಳುವರು ಹರಡಿಕೊಂಡಿದ್ದಾರೆ. ತುಳು ಭಾಷೆ ಬಳಸುವ 1.5 ಕೋಟಿಗೂ ಹೆಚ್ಚು ಜನರನ್ನು ರಾಷ್ಟ್ರೀಯ ಮತ್ತು ಜಾಗತಿಕ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಲಾಗಿದೆ

1 COMMENT

LEAVE A REPLY

Please enter your comment!
Please enter your name here