ಭಾಜಪ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ವಿರುದ್ಧ ಹೈದರಾಬಾದಿನಲ್ಲಿ FIR!

0
143
Tap to know MORE!

ಹೈದರಾಬಾದ್ : ತೇಜಸ್ವಿ ಸೂರ್ಯ ಹೈದ್ರಾಬಾದ್ ಕಾರ್ಪೋರೇಷನ್ ಚುನಾವಣಾ ಪ್ರಚಾರಕ್ಕೆ ತೆರಳಿದ್ದಾರೆ. ಈ ವೇಳೆ ತಮ್ಮ ಬೆಂಬಲಿಗರ ಜೊತೆಗೆ ಉಸ್ಮಾನಿಯ ವಿಶ್ವವಿದ್ಯಾಲಯದ ಒಳಗೆ ಪ್ರವೇಶಿಸಿದ್ದಾರೆ. ಅನುಮತಿ ಇಲ್ಲದೆ ಒಳಗೆ ಪ್ರವೇಶಿಸಿದ್ದು ಅಲ್ಲದೆ, ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ದೂರು ನೀಡಿದೆ. ದೂರಿನ ಮೇರೆಗೆ ತೇಜಸ್ವಿ ಸೂರ್ಯ ಅವರ ವಿರುದ್ಧ ಪೊಲೀಸರು ಕ್ರಿಮಿನಲ್ ಕೇಸ್ ದಾಖಲಿದ್ದಾರೆ.

ವಿಶ್ವವಿದ್ಯಾಲಯ ಪ್ರವೇಶಿಸಿ ಭಾಷಣ ಮಾಡಲು ನಾವು ಸಂಸದ ತೇಜಸ್ವಿ ಸೂರ್ಯ ಅವರಿಗೆ ಯಾವುದೇ ಅನುಮತಿ ನೀಡಿರಲಿಲ್ಲ. ಇಂತಹ ರಾಜಕೀಯ ಘಟನೆಗಳನ್ನು ವಿಶ್ವವಿದ್ಯಾಲಯದಲ್ಲಿ ಅನುಮತಿಸಲಾಗುವುದಿಲ್ಲ. ಉಪಕುಲಪತಿಗಳ ನಿರ್ದೇಶನದ ಮೇರೆಗೆ ನಾವು ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ಉಸ್ಮಾನಿಯಾ ವಿವಿಯ ರಿಜಿಸ್ಟ್ರಾರ್ ಡಾ.ಚ.ಗೋಪಾಲ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ‘ನಬನ್ನಾ ಚಲೋ’ ಪ್ರತಿಭಟನಾ ಮೆರವಣಿಗೆ – ಅಪಾಯದಿಂದ ಪಾರಾದ ತೇಜಸ್ವಿ ಸೂರ್ಯ

2017 ರಲ್ಲಿ ವಿವಿ ಆಡಳಿತವು ಕ್ಯಾಂಪಸ್ ನಲ್ಲಿ ರಾಜಕೀಯ ಚಟುವಟಿಕೆಗಳನ್ನು ನಿಷೇಧಿಸಿತ್ತು. ಶಿಕ್ಷಣತಜ್ಞರಿಗೆ ಸಂಬಂಧವಿಲ್ಲದ ಚಟುವಟಿಕೆಗಳನ್ನು ಕ್ಯಾಂಪಸ್ನಲ್ಲಿ ಅನುಮತಿಸಲಾಗುವುದಿಲ್ಲ ಎಂದು ಹೇಳಿದರು ಕ್ಯಾಂಪಸ್ನಲ್ಲಿ ಇಂತಹ ಘಟನೆಗಳು ನಡೆದಿರುವುದು ದುರಾದೃಷ್ಟಕರ ಎಂದು ಅವರು ವಿಷಾಧ ವ್ಯಕ್ತಪಡಿಸಿದ್ದಾರೆ.

ಮುನ್ಸಿಪಾಲಿಟಿ ಚುನಾವಣೆಯ ಪ್ರಯುಕ್ತ ಪಕ್ಷದ ಪ್ರಚಾರದಲ್ಲಿ ಭಾಗವಹಿಸಲು ಮಂಗಳವಾರ ಹೈದರಾಬಾದ್ಗೆ ಆಗಮಿಸಿದ್ದ ತೇಜಸ್ವಿ ಸೂರ್ಯ ಎನ್ ಸಿಸಿ ಗೇಟ್ ಬಳಿ ಅಡೆತಡೆಗಳನ್ನು ಮುರಿದು ತಮ್ಮ ಬೆಂಬಲಿಗರೊಂದಿಗೆ ವಿಶ್ವವಿದ್ಯಾಲಯದ ಆವರಣಕ್ಕೆ ಪ್ರವೇಶಿಸಿದ್ದರು. ನಂತರ ಅವರು ಆರ್ಟ್ಸ್ ಕಾಲೇಜಿನಲ್ಲಿ ಭಾಷಣ ಮಾಡಿದರು.

LEAVE A REPLY

Please enter your comment!
Please enter your name here