ತೋಕೂರು: ಕೋವಿಡ್ ಲಸಿಕೆಯ ಎರಡನೇ ಡೋಸ್ ನೀಡುವ ಕಾರ್ಯಕ್ರಮ

0
430
Tap to know MORE!

ತೋಕೂರು: ಪ್ರಸ್ತುತ ಪಡುಪಣಂಬೂರು ಗ್ರಾಮ ಪಂಚಾಯತ್ ಕೋವಿಡ್ ಮುಕ್ತ ಗ್ರಾಮವಾಗಿದ್ದು, ಇದನ್ನು ಹೀಗೆಯೇ ಮುಂದುವರಿಸಿಕೊಂಡು ಹೋಗಬೇಕಾದರೆ, ಗ್ರಾಮಸ್ಥರ ಸಂಪೂರ್ಣ ಬೆಂಬಲ ಸದಾ ಇರಬೇಕು. ಸೇವಾ ಸಂಸ್ಥೆಗಳ ಕಾಳಜಿ ಗ್ರಾಮದಲ್ಲಿ ಸಂಘಟಿತವಾಗಿ ಕೆಲಸ ಮಾಡಲು ಸಹಕಾರ ಆಗಿದೆ ಎಂದು ಪಡುಪಣಂಬೂರು ಗ್ರಾಮ ಪಂಚಾಯತ್‌ನ ಅಭಿವೃದ್ಧಿ ಅಧಿಕಾರಿ ಅನಿತಾ ಕ್ಯಾಥರಿನ್ ಹೇಳಿದರು.

ಕೋವಿಡ್ ಲಸಿಕೆ ಪಡೆದವರು ಡೆಲ್ಟಾ ರೂಪಾಂತರದಿಂದ ಹೆಚ್ಚಿನ ರಕ್ಷಣೆಯನ್ನು ಪಡೆಯುತ್ತಾರೆ: ಐಸಿಎಂಆರ್

ತೋಕೂರಿನ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಕೋವಿಡ್ ಲಸಿಕೆಯ ಎರಡನೇ ಡೋಸ್ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿಯ ಅಧ್ಯಕ್ಷ ಹರಿದಾಸ್ ಭಟ್ ಅವರು ಸ್ವಯಂ ಲಸಿಕೆಯನ್ನು ಪಡೆದುಕೊಂಡು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಿಮ್ಮ ಊರಿನ, ಸ್ಥಳೀಯ ಸುದ್ದಿಗಳನ್ನು ಸುದ್ದಿವಾಣಿಯಲ್ಲಿ ಪ್ರಕಟಿಸಲಾಗುವುದು. ಆದ ಜನ ಸ್ನೇಹಿ ಕಾರ್ಯಕ್ರಮಗಳ ವರದಿಯನ್ನು suddivani20@gmail.com ಗೆ mail ಮಾಡಿ

ಪಡುಪಣಂಬೂರು ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷೆ ಕುಸುಮಾ ಅಧ್ಯಕ್ಷತೆಯನ್ನು ವಹಿಸಿದ್ದರು. ಕೆಮ್ರಾಲ್ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಪಡುಪಣಂಬೂರು ಗ್ರಾಮ ಪಂಚಾಯತ್‌ನ ಸಹಕಾರದಲ್ಲಿ, ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ದೇವಸ್ಥಾನ ತೋಕೂರು ಮತ್ತು ಜಿಲ್ಲಾ, ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್‌ (ರಿ)ತೋಕೂರು ಇದರ ಸಂಯೋಜನೆಯಲ್ಲಿ ಜರಗಿತು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಕೆಮ್ರಾಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ಮಾರ್ಗರೇಟ್ ಸುದರ್ಶಿನಿ ಕೋವಿಡ್ ಲಸಿಕೆ ಕುರಿತು ನೀಡಿದರು.

ಪಂಚಾಯತ್‌ನ ಸದಸ್ಯರಾದ ಮೋಹನ್‌ದಾಸ್, ಹೇಮನಾಥ್ ಅಮೀನ್, ದಿನೇಶ್ ಶೆಟ್ಟಿ, ಸಂತೋಷ್‌ಕುಮಾರ್, ಜ್ಯೋತಿ ಕುಲಾಲ್, ಕ್ಲಬ್‌ನ ಗೌರವಾಧ್ಯಕ್ಷ ನಾರಾಯಣ ಜಿ.ಕೆ., ಮಹಿಳಾ ಕಾರ್ಯಕಾರಿ ಸಮಿತಿ ಕಾರ್ಯಾಧ್ಯಕ್ಷೆ ವಾಣಿ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಪಡುಪಣಂಬೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷೆ ಮಂಜುಳಾ ಹಾಗೂ ಜಿ.ಪಂ.ನ ಮಾಜಿ ಸದಸ್ಯ ವಿನೋದ್‌ಕುಮಾರ್ ಬೊಳ್ಳೂರು ಭೇಟಿ ನೀಡಿದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸ್ಪೋರ್ಟ್ಸ್ ಕ್ಲಬ್ ನ ಪದಾಧಿಕಾರಿಗಳು, ಸದಸ್ಯರು ಮತ್ತು ಸದಸ್ಯೆಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

175 ಫಲಾನುಭವಿಗಳು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು. ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷ ಸಂತೋಷ್ ದೇವಾಡಿಗ ಸ್ವಾಗತಿಸಿದರು, ಪ್ರಶಾಂತ್‌ಕುಮಾರ್ ಬೇಕಲ್ ವಂದಿಸಿದರು, ಸುರೇಶ್ ಶೆಟ್ಟಿ ನಿರೂಪಿಸಿದರು.

LEAVE A REPLY

Please enter your comment!
Please enter your name here