ತೋಕೂರು : ಸ್ವಚ್ಛೋತ್ಸವ – ನಿತ್ಯೋತ್ಸವ ಮಾಸಾಚರಣೆಗೆ ಚಾಲನೆ

0
170
Tap to know MORE!

ಮಹಾತ್ಮಾ ಗಾಂಧೀಜಿಯವರ 151 ಜನ್ಮ ದಿನಾಚರಣೆ ಪ್ರಯುಕ್ತ ಸ್ವಚ್ಛೋತ್ಸವ ಮತ್ತು ನಿತ್ಯೋತ್ಸವ ಮಾಸಾಚರಣೆಗೆ ಚಾಲನೆ ನೀಡಲಾಯಿತು. ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ)ತೋಕೂರು ಹಳೆಯಂಗಡಿ ಇದರ ಸಂಯೋಜನೆಯಲ್ಲಿ ಅಕ್ಟೋಬರ್ 2 ರಿಂದ 31 ರವರೆಗೆ ಮಾಸಾಚರಣೆಯು ನಡೆಯಲಿದೆ.

ತೋಕೂರು ಅಂಗನವಾಡಿ ಕೇಂದ್ರದ ಆವರಣದಲ್ಲಿ ಅಡಿಕೆ ಸಸಿಗಳನ್ನು ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಂಸ್ಥೆಯ ಮಹಿಳಾ ಕಾರ್ಯಧ್ಯಕ್ಷೆ ಶ್ರೀಮತಿ ವಾಣಿ ಮಹೇಶ್ ತಂಪಾದ ಗಾಳಿಯ ಮೂಲಕ ನೆರಳನ್ನು ನೀಡುವ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆ ಮಾಡಿದರೆ ಆರೋಗ್ಯವಂತರಾಗಿರಲು ಸಹಕಾರಿ ಆಗುತ್ತದೆ ಎಂದರು.

ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರದ ಶಿಕ್ಷಕಿ ಮೀನಾಕ್ಷಿ, ಸಹಾಯಕಿ ಶ್ರೀಮತಿ ಪುಷ್ಪಾ ಶಿವ ದೇವಾಡಿಗ, ಪಡುಪಣಂಬೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಶ್ರೀ ಸಂತೋಷ್ ಕುಮಾರ್ ಸರಕಾರಿ ಹಿರಿಯ ಪ್ರಾಥಮಿಕ ಹಿಂದೂಸ್ಥಾನಿ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಗುಲ್ಶನ್ ಬಾನು ಸಂಸ್ಥೆಯ ಗೌರವಾ ಅಧ್ಯಕ್ಷರು, ಉಪಾಧ್ಯಕ್ಷರಾದ ಶ್ರೀ ನಾರಾಯಣ ಜಿ ಕೆ, ಕೋಶಾಧಿಕಾರಿ ಶ್ರೀ ಸಂಪತ್ ದೇವಾಡಿಗ, ಕಾರ್ಯಕಾರಿ ಸಮಿತಿ ಅಧ್ಯಕ್ಷರು ಶ್ರೀ ಸುರೇಶ್ ಶೆಟ್ಟಿ, ಇತರ ಪದಾಧಿಕಾರಿಗಳು ಮತ್ತು ಸದಸ್ಯರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here