ದಕ್ಷಿಣ ಕನ್ನಡದಲ್ಲಿ ಕೊರೋನಾಗೆ ಮತ್ತೊಂದು ಬಲಿ

0
188
Tap to know MORE!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕೊರೊನಾಗೆ ಮೃತಪಟ್ಟವರ ಸಂಖ್ಯೆ 9 ಕ್ಕೆ ಏರಿದೆ. ಇಂದು ನಗರದ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ 70 ವರ್ಷದ ವೃದ್ಧ ಬಲಿಯಾಗಿದ್ದಾರೆ. ಮೃತ ವ್ಯಕ್ತಿಯು ಪೇಶೆಂಟ್ ನಂ. 6282 ಆಗಿದ್ದರು. ಈ ವ್ಯಕ್ತಿಯು ಜೂ 7 ರಂದು ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸಿದ್ದರು.

ತೀವ್ರ ಅಸ್ತಮಾ ಮತ್ತು ನ್ಯುಮೋನಿಯದಿಂದ ಬಳಲುತ್ತಿದ್ದ ಈ ವ್ಯಕ್ತಿ ಜೂ. 12 ರಂದು ಕೊರೊನಾ ಚಿಕಿತ್ಸೆಗೆ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. ಶ್ವಾಸಕೋಶದ ಸೋಂಕು ಮತ್ತು SARI ಲಕ್ಷಣಗಳನ್ನು ಹೊಂದಿದ್ದ ವೃದ್ಧ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

LEAVE A REPLY

Please enter your comment!
Please enter your name here