ದಕ್ಷಿಣ ಕನ್ನಡದಲ್ಲಿ ನಾಳೆ ಸಂಡೇ ಕರ್ಫ್ಯೂ : ಡಿಸಿ ಆದೇಶ

0
217
Tap to know MORE!

ಮಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ನಾಳೆ ರಾಜ್ಯಾದ್ಯಂತ ಲಾಕ್ಡೌನ್ ಜಾರಿಯಾಗಲಿದೆ. ಆದ್ದರಿಂದ ಜಿಲ್ಲೆಯಾದ್ಯಂತ ಬಿಗಿ ಕರ್ಫ್ಯೂ ವಿಧಿಸಿ ಎಂದು ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಆದೇಶಿಸಿದ್ದಾರೆ.

ನಾಳೆ ಅಗತ್ಯ ವಸ್ತುಗಳಾದ ಹಾಲು, ದಿನಪತ್ರಿಕೆ, ಮೆಡಿಕಲ್, ಆಸ್ಪತ್ರೆಗಳನ್ನು ಹೊರತುಪಡಿಸಿ ಎಲ್ಲವನ್ನೂ ಬಂದ್ ಮಾಡಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ತರಕಾರಿ, ದಿನಸಿ ಮತ್ತು ಮಾಂಸ ಮಾರಾಟಕ್ಕೂ ಜಿಲ್ಲಾಡಳಿತ ತಡೆ ನೀಡಿದೆ.

ಯಾರು ಮನೆಯಿಂದ ಹೊರ ಬರದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಲಾಕ್ ಡೌನ್ ಕಾನೂನು ಹಾಗೂ ಜಿಲ್ಲಾಧಿಕಾರಿಯವರ ಆದೇಶ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಹಾಲು, ಆಸ್ಪತ್ರೆ, ದಿನಪತ್ರಿಕೆ ಹೊರತುಪಡಿಸಿ ಇತರ ಯಾರಾದರೂ ಅಂಗಡಿ ತೆರೆದರೂ ಕಠಿಣ ಕ್ರಮ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಆದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here