ದಕ್ಷಿಣ ಕನ್ನಡ: ಶಾಲಾ ಆರಂಭ ಒಂದು ವಾರ ಮುಂದೂಡಿಕೆ!

0
1627
Tap to know MORE!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರವು ಶೇ 2ಕ್ಕಿಂತ ಹೆಚ್ಚಿರುವ ಕಾರಣ ಶಾಲಾ ಆರಂಭವನ್ನು ಆಗಸ್ಟ್ 28ರ ನತಕ ಮುಂದೂಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ (ಡಿಡಿಪಿಐ) ಮಲ್ಲೇಸ್ವಾಮಿ ತಿಳಿಸಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಕೋವಿಡ್ ಪಾಸಿಟಿವಿಟಿ ದರವು ಶೇ 2ಕ್ಕಿಂತ ಕಡಿಮೆಯಾದರೆ, 9 ಮತ್ತು 10ನೇ ಭೌತಿಕ ತರಗತಿಯನ್ನು ಆ.23ರಂದು ಆರಂಭಿಸಲು ಸರ್ಕಾರ ನಿರ್ಧರಿಸಿತ್ತು. ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರವು ಇನ್ನೂ ಶೇ 2ಕ್ಕಿಂತ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಶಾಲಾ ಆರಂಭ ಮುಂದೂಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಈ ಹಿಂದಿನಂತೆ ಆನ್‌ಲೈನ್ ತರಗತಿಗಳನ್ನು ನಡೆಸಬೇಕು ಎಂದು ಡಿಡಿಪಿಐ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here