ಜಿಲ್ಲೆಯಲ್ಲಿ ದಸರಾ ಹಬ್ಬ ಆಚರಿಸಲು ದ.ಕ ಜಿಲ್ಲಾಧಿಕಾರಿ ಅನುಮತಿ

0
136
Tap to know MORE!

ಮಂಗಳೂರು: ದಸರಾ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಕೊರೋನ ಮಾರ್ಗಸೂಚಿ ಪಾಲಿಸಿ ಉತ್ಸವ ಆಚರಿಸಲು ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಶನಿವಾರ ಅನುಮತಿ ನೀಡಿದ್ದಾರೆ.

ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಧಾರ್ಮಿಕ ಪರಿಷತ್‌ನ ಸಭೆಯಲ್ಲಿ ಕೊರೋನಾ ಮಾರ್ಗಸೂಚಿಗಳನ್ನು ಪಾಲಿಸಿ ಉತ್ಸವ ನಡೆಸಬೇಕು. ದಸರಾ ಹಬ್ಬದಲ್ಲಿ ಹೆಚ್ಚಿನ ಜನಸಂದಣಿ ಸೇರುವ ಪ್ರತಿಯೊಂದು ದೇವಸ್ಥಾನಗಳಲ್ಲಿ ಭಕ್ತಾದಿಗಳಿಗೆ ಸ್ಯಾನಿಟೈಸರ್, ಥರ್ಮಲ್ ಸ್ಕಾನಿಂಗ್ ಹಾಗೂ ಮಾಸ್ಕ್ ಧರಿಸುವಿಕೆಯನ್ನು ಕಡ್ಡಾಯ ಮಾಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಯಾವುದೇ ಸಂಘ-ಸಂಸ್ಥೆಗಳು ದೇವಿಯ ಮೂರ್ತಿಯನ್ನು ಪ್ರತಿಷ್ಠಾಪಿಸುವ ಕಡೆ ಯಾವುದೇ ಸಭೆ ಅಥವಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡದೆ, ಸರಳವಾಗಿ ಧಾರ್ಮಿಕವಾಗಿ ಆಚರಿಸಲು ತೀರ್ಮಾನ ಕೈಗೊಳ್ಳಲಾಯಿತು.

ಅದೇ ರೀತಿ, ಈ ಬಾರಿಯ ದಸರಾ ಹಬ್ಬದಲ್ಲಿ ಹುಲಿ ವೇಷ ತಂಡಗಳಿಗೆ ಅವಕಾಶ ನಿರ್ಬಂಧಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ದೇವಸ್ಥಾನದ ಆವರಣದ ಒಳಗೆ ಸುರಕ್ಷಿತ ಅಂತರದಲ್ಲಿ ಕುರ್ಚಿಗಳನ್ನಿರಿಸಿ, ಸಾಮಾಜಿಕ ಜಾಲತಾಣದಲ್ಲಿ ನೇರಪ್ರಸಾರ ಮಾಡುವುದಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಯಾವುದೇ ದೊಡ್ಡ ಗಾತ್ರದ ಶಾಮಿಯಾನ, ಚಪ್ಪರ ಹಾಕಲು ಅವಕಾಶವಿಲ್ಲ. ಅಲ್ಲದೇ ಹಬ್ಬದಲ್ಲಿ ಜಾತ್ರೆ, ಸಂತೆಗಳಿಗೆ ಅವಕಾಶವಿಲ್ಲ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here