BIG NEWS| ಇಂದಿನಿಂದ ಮಧ್ಯಾಹ್ನ 12 ರವರೆಗೆ ದಿನಸಿ, ಸಂಜೆ 6 ರರವರೆಗೆ ತರಕಾರಿ ಅಂಗಡಿಗಳು ಓಪನ್!

0
186
Tap to know MORE!

ಬೆಂಗಳೂರು: ದಿನಸಿ ಮತ್ತು ಎಪಿಎಂಸಿ ಮಾರುಕಟ್ಟೆಯನ್ನು ಬೆಳಿಗ್ಗೆ 6 ಗಂಟೆಯಿಂದ 12ರವರೆಗೆ ತೆರೆಯಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮೇ 2ರ ಭಾನುವಾರದಿಂದ ಅನ್ವಯವಾಗುವಂತೆ ಈ ಪರಿಷ್ಕೃತ ಆದೇಶ ಜಾರಿಯಲ್ಲಿರಲಿದೆ ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್‌. ಮಂಜುನಾಥ ಪ್ರಸಾದ್ ತಿಳಿಸಿದ್ದಾರೆ.

ಇದನ್ನೂ ಓದಿ: ಶೇ.50 ನೌಕರರೊಂದಿಗೆ ಗಾರ್ಮೆಂಟ್ಸ್ ಉತ್ಪಾದನಾ ಘಟಕ ತೆರೆಯಲು ಅನುಮತಿಸಿದ ರಾಜ್ಯ ಸರ್ಕಾರ

ಖರೀದಿ ವೇಳೆ ಮಾರುಕಟ್ಟೆಯಲ್ಲಿ ಆಗುತ್ತಿರುವ ನೂಕುನುಗ್ಗಲು, ಜನಸಂದಣಿ ತಪ್ಪಿಸಲು ಈ ‍ ಉಪಕ್ರಮ ಕೈಗೊಳ್ಳಲಾಗಿದೆ. ವಾರದ ಸಂತೆ ಸೇರಿದಂತೆ ಎಲ್ಲ ರೀತಿಯ ಸಂತೆಗಳನ್ನೂ ನಿರ್ಬಂಧಿಸಲಾಗಿದೆ. ಅದರ ಬದಲಿಗೆ ಹಾಪ್‌ಕಾಮ್ಸ್‌, ಹಾಲಿನ ಬೂತ್‌ಗಳು, ತಳ್ಳುಗಾಡಿಗಳ ಮೂಲಕ ತರಕಾರಿ, ಹಣ್ಣು ಮಾರಾಟಮಾಡುವವರು ಹಾಗೂ ದುಬಾರಿ ಬೆಲೆಗೆ ಮಾರದೇ ಮಾರುಕಟ್ಟೆ ದರದಲ್ಲಿ ವ್ಯಾಪಾರ ಮಾಡುವವರಿಗೆ ಬೆಳಿಗ್ಗೆ 6ರಿಂದ ಸಂಜೆ 6ರವರೆಗೂ ಅವಕಾಶ ನೀಡಲಾಗಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಬಿಬಿಎಂಪಿ, ಪೊಲೀಸ್ ಕಮಿಷನರ್, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಆದೇಶವನ್ನು ಜಾರಿ ಮಾಡಲು ಅವರು ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here