ಭಾರತೀಯ ಚಿತ್ರರಂಗದ ಹಿರಿಯ ನಟ ದಿಲೀಪ್ ಕುಮಾರ್ ಇನ್ನಿಲ್ಲ!

0
174
Tap to know MORE!

ಭಾರತೀಯ ಚಿತ್ರರಂಗದ ದಂತಕತೆ ದಿಲೀಪ್ ಕುಮಾರ್ ಇನ್ನಿಲ್ಲ. ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ ಇಂದು ಬೆಳಗ್ಗೆ 7.30ಕ್ಕೆ ಕೊನೆಯುಸಿರೆಳೆದಿದ್ದಾರೆ. 1922 ಡಿಸೆಂಬರ್ 11ರಲ್ಲಿ ಜನಸಿದ್ದ ದಿಲೀಪ್ ಕುಮಾರ್ ನಿಜವಾದ ಹೆಸರು ಮಹಮ್ಮದ್ ಯೂಸುಫ್ ಖಾನ್. ಹಾಗಾಗಿ ಇವರನ್ನು ಬಾಲಿವುಡ್ ನ ಮೊದಲ ಖಾನ್ ಎನ್ನಲಾಗುತ್ತಿತ್ತು. ಪತ್ನಿ ಸಾಯಿರಾ ಬಾನು ಜೊತೆ ತುಂಬು ಜೀವನ ನಡೆಸಿದ ದಿಲೀಪ್ ಕುಮಾರ್ ಇಂದು ಇಹಲೋಕ ತ್ಯಜಿಸಿದ್ದಾರೆ. ಫಿಲ್ಮ್​ಫೇರ್ ಪ್ರಶಸ್ತಿ ಆರಂಭವಾದಾಗ ಅದನ್ನು ಪಡೆದ ಮೊದಲ ವ್ಯಕ್ತಿ ದಿಲೀಪ್ ಕುಮಾರ್.

1944ರಲ್ಲಿ ಜ್ವರ್ ಭಾತಾ ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದ ದಿಲೀಪ್ ಅಂದಾಜ್, ದಾಗ್, ದೇವದಾಸ್, ಆಜಾದ್, ಶಕ್ತಿ, ಮಸಾಲ್, ಸೌದಾಗರ್, ಕ್ರಾಂತಿ, ಮಘಲ್ ಎ ಆಜಮ್ ಮುಂತಾದ ಚಿತ್ರಗಳಿಂದ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದಿದ್ದಾರೆ.

ಕೆಜಿಎಫ್ ಚಾಪ್ಟರ್ 2: ಮಹತ್ವದ ಘೋಷಣೆ ಮಾಡಿದ ನಿರ್ದೇಶಕ ಪ್ರಶಾಂತ್ ನೀಲ್!

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಇತ್ತೀಚೆಗಷ್ಟೇ ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿ ನಂತರ ಚೇತರಿಸಿಕೊಂಡು ಮನೆಗೆ ಮರಳಿದ್ದರು.  ಮತ್ತೆ ಪುನಃ ಅನಾರೋಗ್ಯ ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆ ಸೇರಿದ್ದರು. ಕಳೆದ 8 ದಿನಗಳಿಂದ ಮುಂಬೈನ ಹಿಂದುಜಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ಅವರ ಅಂತಿಮಸಂಸ್ಕಾರವನ್ನು ಸಾಂಟ್ರಾಕ್ರೂಜ್ ಚಿತಾಗಾರದಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

LEAVE A REPLY

Please enter your comment!
Please enter your name here