ದೇಶದಲ್ಲಿ ಕೊರೋನಾ ಹರಡುತ್ತಿದ್ದರೂ, ಮೋದಿಯವರು ಬಿಹಾರ ಚುನಾವಣೆಯ ಮೇಲೆ ಕಣ್ಣಿಟ್ಟಿದ್ದಾರೆ: ಕಾಂಗ್ರೆಸ್

0
74

ಪ್ರಧಾನಿ ನರೇಂದ್ರ ಮೋದಿಯವರು ಇಂದು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಟೀಕಿಸಿದೆ. “ನ್ಯಾಯ್ ಯೋಜನೆಯನ್ನು ಜಾರಿಗೆ ತರಬೇಕೆಂದು ಜನರು ಬಯಸುತ್ತಿರುವ ಈ ಕಠಿಣ ಕಾಲದಲ್ಲಿ, ಅವರು ಬಿಹಾರ ವಿಧಾನಸಭಾ ಚುನಾವಣೆಯನ್ನು ಮಾತ್ರ ತಮ್ಮ ಮನಸ್ಸಿನಲ್ಲಿಟ್ಟುಕೊಂಡಿದ್ದಾರೆ” ಎಂದು ಹೇಳಿದ್ದಾರೆ.

ಕೊರೋವೈರಸ್ ಬಿಕ್ಕಟ್ಟು ನವೆಂಬರ್ ವರೆಗೆ ಇರುತ್ತದೆ ಎಂದು ಪ್ರಧಾನಮಂತ್ರಿಯವರೇ ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಆದರೆ ಕಾಂಗ್ರೆಸ್ ಪಕ್ಷವು, ಪ್ರಧಾನಮಂತ್ರಿಯವರು ನ್ಯಾಯ್ ಯೋಜನೆಯ ಅಡಿಯಲ್ಲಿ ಪ್ರತಿ ಬಡ ಕುಟುಂಬಕ್ಕೆ ತಿಂಗಳಿಗೆ ₹7,500 ನಗದು ವರ್ಗಾವಣೆಯನ್ನು ಪ್ರಕಟಿಸುತ್ತದೆ ಎಂದು ನಿರೀಕ್ಷಿಸಿದ್ದರು.

ಪಕ್ಷದ ನಾಯಕಿ ಸುಪ್ರಿಯಾ ಶ್ರೀನಾತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, “ಪ್ರಧಾನಿಯವರು ಬಿಹಾರ ಚುನಾವಣೆಗಳ ಮೇಲೆ ಮಾತ್ರ ಗಮನಹರಿಸಿದ್ದಾರೆ ಮತ್ತು ದೇಶಕ್ಕೆ ಎದುರಾಗಿರುವ ಸವಾಲುಗಳನ್ನು ಎದುರಿಸುವ ಬಗ್ಗೆ, ಅವರ ಭಾಷಣದಲ್ಲಿ ಏನೂ ಇರಲಿಲ್ಲ” ಎಂದು ಹೇಳಿದರು.

LEAVE A REPLY

Please enter your comment!
Please enter your name here