ದ್ರೋಣಾಚಾರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದ ತುಳುನಾಡಿನ ಹಿರಿಯ ಕೋಚ್ ಪುರುಷೋತ್ತಮ ರೈಗಳು ಪ್ರಶಸ್ತಿ ಸ್ವೀಕರಿಸುವ ಮುನ್ನವೇ ನಿಧನ

0
160
Tap to know MORE!

ಕ್ರೀಡಾ ಕ್ಷೇತ್ರದ ಪ್ರತಿಷ್ಠಿತ ಪ್ರಶಸ್ತಿಗಳಲ್ಲೊಂದಾದ ದ್ರೋಣಾಚಾರ್ಯ ಪ್ರಶಸ್ತಿಗೆ ದಕ್ಷಿಣ ಕನ್ನಡದ ಪುತ್ತೂರಿನ ಸೂತ್ರಬೆಟ್ಟು ಮನೆತನದ ಪುರುಷೋತ್ತಮ್ ರೈ ಆಯ್ಕೆಯಾಗಿದ್ದರು. ಇಂದಿನ ಪ್ರಶಸ್ತಿ ವಿತರಣೆಯ ಖುಷಿಯಲ್ಲಿರುವಾಗಲೇ ಪ್ರಶಸ್ತಿ ಪುರಸ್ಕೃತ ಪುರುಷೋತ್ತಮ ರೈಗಳು ನಿನ್ನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಜೀವಮಾನ ಸಾಧನೆಗಾಗಿ ಕೊಡಮಾಡುವ ಈ ಪ್ರಶಸ್ತಿಯನ್ನು ಸ್ವೀಕರಿಸುವ ಮೊದಲೇ ನಿಧನವಾಗಿರುವುದು ಕುಟುಂಬ ಸದಸ್ಯರಲ್ಲಿ ದುಃಖವನ್ನುಂಟು ಮಾಡಿದೆ.

79 ವರ್ಷದ ಪುರುಷೋತ್ತಮ ರೈಗಳು ಕಳೆದ 35 ವರ್ಷಗಳ ಕಾಲ ರಾಜ್ಯದ ಅಥ್ಲೀಟ್‌ಗಳಿಗೆ ತರಬೇತಿ ನೀಡಿದ್ದರು. ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಶನಿವಾರ ಬೆಂಗಳೂರಿನ ಸಾಯ್ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ವರ್ಚುವಲ್ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಸಮಾರಂಭದಲ್ಲಿ ಅವರು ಜೀವಮಾನ ಸಾಧನೆಗಾಗಿ ದ್ರೋಣಾಚಾರ್ಯ ಪ್ರಶಸ್ತಿ ಸ್ವೀಕರಿಸಬೇಕಿತ್ತು. ದಿನಪೂರ್ತಿ ಎಂದಿನಂತೆ ಲವವಿಕೆಯಿಂದಲೇ ಇದ್ದ ಪುರುಷೋತ್ತಮ್ ರೈ ಅವರಿಗೆ ಸಂಜೆ ವೇಳೆಗೆ ದಿಢೀರನೇ ಎದೆ ನೋವು ಕಾಣಿಸಿಕೊಂಡಿತು. ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚೇತರಿಸಿಕೊಳ್ಳದೆ ಕೊನೆಯುಸಿರು ಎಳೆದಿದ್ದಾರೆ.

LEAVE A REPLY

Please enter your comment!
Please enter your name here