Second PUC Results| ದ್ವಿತೀಯ ಪಿಯುಸಿ ಫಲಿತಾಂಶ| ಗ್ರೇಡ್ ಅಲ್ಲ, ಅಂಕಗಳನ್ನೇ ಪ್ರಕಟಿಸಲಾಗುವುದು: ಪ. ಪೂ. ಶಿಕ್ಷಣ ಇಲಾಖೆ

0
220
Tap to know MORE!

ಬೆಂಗಳೂರು : ರಾಜ್ಯ ಸರ್ಕಾರ ದ್ವಿತೀಯ ಪಿಯು ಪರೀಕ್ಷೆಯನ್ನು ಕೊರೋನಾ ಕಾರಣದಿಂದಾಗಿ ರದ್ದು ಪಡಿಸಿತ್ತು. ಈ ಬಾರಿ ಹಿಂದಿನ ಪ್ರಥಮ ಪಿಯುಸಿ, ಎಸ್ ಎಸ್ ಎಲ್ ಸಿ ಅಂಕಗಳ ಆಧಾರದ ಮೇಲೆ ಗ್ರೇಡ್ ರೂಪದಲ್ಲಿ ಫಲಿತಾಂಶ ಪ್ರಕಟಿಸೋದಾಗಿ ಘೋಷಿಸಿತ್ತು. ಆದ್ರೇ.. ಇದೀಗ ದ್ವಿತೀಯ ಪಿಯು ಫಲಿತಾಂಶದಲ್ಲಿ ಮತ್ತೆ ಬದಲಾವಣೆ ಮಾಡಲಾಗಿದೆ. ಗ್ರೇಡ್ ಬದಲಾಗಿ ಅಂಕಗಳ ಆಧಾರದ ಮೇಲೆಯೇ ಫಲಿತಾಂಶ ಪ್ರಕಟಗೊಳಿಸೋದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಸ್ನೇಹಲ್ ತಿಳಿಸಿದ್ದಾರೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಿರುವಂತ ಅವರು, ದ್ವಿತೀಯ ಪಿಯು ಫಲಿತಾಂಶವನ್ನು ಗ್ರೇಡ್ ಮಾದರಿಯಲ್ಲಿ ಪ್ರಕಟಿಸೋದರಿಂದಾಗಿ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ತೊಂದರೆಯಾಗಲಿದೆ. ಇದರಿಂದಾಗಿ ಈ ಕ್ರಮವನ್ನು ಬದಲಿಸಲಾಗುತ್ತಿದ್ದು, ಹಳೆಯ ಪದ್ದತಿಯಂತೆಯೇ ಅಂಕಗಳ ಮಾದರಿಯಲ್ಲಿ ಫಲಿತಾಂಶವನ್ನು ಪ್ರಕಟಿಸೋದಾಗಿ ಹೇಳಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸದಂತೆ ತಡೆ ನೀಡಿದ ಕರ್ನಾಟಕ ಹೈಕೋರ್ಟ್

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಇನ್ನೂ ಈ ಬಾರಿಯ ದ್ವಿತೀಯ ಪಿಯು ಫಲಿತಾಂಶ ಜೂನ್ ಕೊನೆಯ ವಾರದಲ್ಲಿ ಪ್ರಕಟಿಸೋ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಗ್ರೇಡ್ ಮಾದರಿಯಲ್ಲಿ ಫಲಿತಾಂಶ ಪ್ರಕಟಿಸೋದ್ರಿಂದ ಪಿಯು ವಿದ್ಯಾರ್ಥಿಗಳಿಗೆ ಮುಂದಿನ ಉದ್ಯೋಗಾವಕಾಶದ ಸಂದರ್ಭದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಲಿದೆ. ಈ ಎಲ್ಲವನ್ನು ಗಮನದಲ್ಲಿ ಇಟ್ಟುಕೊಂಡು, ದ್ವಿತೀಯ ಪಿಯು ಫಲಿತಾಂಶವನ್ನು ಹಳೆಯ ಮಾದರಿಯಲ್ಲಿಯೇ ಅಂಕಗಳ ರೀತಿಯಲ್ಲಿ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here