ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸದಂತೆ ತಡೆ ನೀಡಿದ ಕರ್ನಾಟಕ ಹೈಕೋರ್ಟ್

0
130
Tap to know MORE!

ಬೆಂಗಳೂರು : ರಾಜ್ಯ ಸರ್ಕಾರ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಪಡಿಸಿತ್ತು. ಅಲ್ಲದೇ ಈ ಹಿಂದಿನ ಪ್ರಥಮ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸುವುದಾಗಿ ತಿಳಿಸಿತ್ತು. ಆದ್ರೆ, ಇದೀಗ ರಾಜ್ಯ ಹೈಕೋರ್ಟ್ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಕ್ಕೆ ತಡೆ ನೀಡಿದೆ.

ಈ ಕುರಿತಂತೆ ರಾಜ್ಯ ಹೈಕೋರ್ಟ್(Karnataka High Court) ನಲ್ಲಿ ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕೆಲ ವಿದ್ಯಾರ್ಥಿಗಳು ಸಲ್ಲಿಸಿದ್ದಂತಹ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಇಂದು ವಿಚಾರಣೆಗೆ ಕೈಗೆತ್ತಿಕೊಂಡ ಹೈಕೋರ್ಟ್ ನ್ಯಾಯಪೀಠವು, ಕೇವಲ ಫ್ರೆಶರ್ಸ್ ವಿದ್ಯಾರ್ಥಿಗಳನ್ನು ಮಾತ್ರ ಪಾಸ್ ಮಾಡಿ, ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುತ್ತಿರುವಂತ ಸರ್ಕಾರದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತ ಪಡಿಸಿತು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಇದನ್ನೂ ಓದಿ : ಆಗಸ್ಟ್ 28, 29 ರಂದು ಸಿಇಟಿ ಪರೀಕ್ಷೆ | ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸದಂತೆ ಸೂಚನೆ

ಸರ್ಕಾರದ ನಿರ್ಧಾರದ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದಂತ ಹೈಕೋರ್ಟ್ ನ್ಯಾಯಪೀಠವು, ಗುರುವಾರದ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ(Second PUC Exam 2021)ಯ ಫಲಿತಾಂಶ ಪ್ರಕಟ ಮಾಡದಂತೆ ತಡೆ ನೀಡಿ, ವಿಚಾರಣೆಯನ್ನು ಮುಂದೂಡಿದೆ

LEAVE A REPLY

Please enter your comment!
Please enter your name here