ಜುಲೈ 20ರೊಳಗೆ ದ್ವಿತೀಯ ಪಿಯುಸಿ ಫಲಿತಾಂಶ | SATS ಪೋರ್ಟಲ್‌ನಲ್ಲಿ ವಿದ್ಯಾರ್ಥಿಗಳ SSLC, ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ

0
230
Tap to know MORE!

ಬೆಂಗಳೂರು: ದ್ವಿತೀಯ ಪಿಯು ಫಲಿತಾಂಶವನ್ನು ಜು.20ರೊಳಗೆ ಬಿಡುಗಡೆ ಮಾಡಲು ಪದವಿ ಪೂರ್ವ ಶಿಕ್ಷಣ ಇಲಾಖೆಯು ನಿರ್ಧರಿಸಿದ್ದು, ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳನ್ನು ಪರಿಶೀಲಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿದೆ.

ಈ ಬಾರಿ ದ್ವಿತೀಯ ಪಿಯು ಫಲಿತಾಂಶಕ್ಕೆ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯು ಎರಡು ಅಂಕಗಳನ್ನು ಸಮೀಕರಿಸಿ ಆನಂತರ ಫಲಿತಾಂಶ ನಿಗದಿ ಮಾಡುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ತಮ್ಮ ಈ ಎರಡೂ ಫಲಿತಾಂಶಗಳು ಸರಿ ಇವೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಲು ಪದವಿ ಪೂರ್ವ ಶಿಕ್ಷಣ ಇಲಾಖೆ ಅವಕಾಶ ಕಲ್ಪಿಸಿದೆ.

ಫಲಿತಾಂಶ ನೀಡುವುದಕ್ಕೂ ಮುನ್ನ ಸಂಬಂಧಿಸಿದ ವಿದ್ಯಾರ್ಥಿಗಳ ಪರಿಶೀಲನೆಗಾಗಿ ಅವರ 10ನೇ ತರಗತಿ ಮತ್ತು ಪ್ರಥಮ ಪಿಯುಸಿ ಫಲಿತಾಂಶವನ್ನು ವಿದ್ಯಾರ್ಥಿಗಳು ಸ್ಟೂಡೆಂಟ್ಸ್ ಅಚೀವ್ಮೆಂಟ್ ಟ್ರಾಕಿಂಗ್ ಸಿಸ್ಟಮ್ (ಎಸ್‌ಎಟಿಎಸ್) ವೆಬ್ ಪೋರ್ಟಲ್‌ನಲ್ಲಿ (https://sts.karnataka.gov.in/SATSPU/main.htm) ಪ್ರಕಟಿಸಿದೆ.

ವಿದ್ಯಾರ್ಥಿಗಳು ಈ ವೆಬ್ ಪೋರ್ಟಲ್‌ಗೆ ಭೇಟಿ ನೀಡಿ ಅಲ್ಲಿ,  10th and PUC marks ವಿಭಾಗದಲ್ಲಿ, ಇಲಾಖೆ ನೀಡಿರುವ ತಮ್ಮ ಎಸ್‌ಎಟಿಎಸ್ ಸಂಖ್ಯೆ (SATS No.) ಅಥವಾ ಕಾಲೇಜಿನಲ್ಲಿ ನೀಡಿದ್ದ ವಿದ್ಯಾರ್ಥಿ ಸಂಖ್ಯೆ (Student no.) ಅಥವಾ ಪರೀಕ್ಷಾ ನೋಂದಣಿ ಸಂಖ್ಯೆ (Enrollment No.) ಈ ಮೂರಲ್ಲಿ ಯಾವುದಾದರೂ ಒಂದು ಸಂಖ್ಯೆ ನಮೂದಿಸಿ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಫಲಿತಾಂಶವನ್ನು ಪ್ರತ್ಯೇಕವಾಗಿ ಪರಿಶೀಲಿಸಿಕೊಳ್ಳಬಹುದು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಫಲಿತಾಂಶದಲ್ಲಿ ಏನಾದರೂ ವ್ಯತ್ಯಾಸಗಳಿದ್ದರೆ ತಮ್ಮ ಶಾಲೆ ಅಥವಾ ಕಾಲೇಜಿನ ಪ್ರಾಂಶುಪಾಲರನ್ನು ಜು.12ರ ಒಳಗೆ ಸಂಪರ್ಕಿಸಿ ಮಾಹಿತಿ ನೀಡಬೇಕು. ಪ್ರಾಂಶುಪಾಲರು ಅದನ್ನು ಸರಿಪಡಿಸಿ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಇಲಾಖೆ ನಿರ್ದೇಶಕರಾದ ಸ್ನೇಹಲ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here