ದ.ಕ ಜಿಲ್ಲಾಧಿಕಾರಿ ವರ್ಗಾವಣೆ – ಯು.ಟಿ.ಖಾದರ್ ಆಕ್ರೋಶ

0
152
Tap to know MORE!

ಮಂಗಳೂರು: ದ.ಕ ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ ವರ್ಗಾವಣೆ ವಿಚಾರದಲ್ಲಿ ಸರ್ಕಾರದ ವಿರುದ್ಧ ಹಲವರಿಂದ ಟೀಕೆಗಳು ಕೇಳಿಬರುತ್ತಿದೆ. ಇದೀಗ ರಾಜ್ಯ ಸರ್ಕಾರದ ವಿರುದ್ದ ಮಾಜಿ ಸಚಿವ ಯು.ಟಿ.ಖಾದರ್ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

ಕಾನೂನು ಕೈಗೆತ್ತಿಕೊಂಡರೆ, ನೈತಿಕ‌ ಪೋಲಿಸ್ ಗಿರಿ ಮಾಡಿದ್ರೆ ಕ್ರಮ ಕೈಗೊಳ್ಳತ್ತೇನೆ ಎಂದಿದ್ದಕ್ಕೆ ದುಷ್ಕರ್ಮಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ರವರಿಗೆ ಕೊಲೆ ಬೆದರಿಕೆ ಹಾಕಿದರು.ಸರ್ಕಾರ ಕೊಲೆ ಬೆದರಿಕೆ‌ ಹಾಕಿದವರಿಗೆ ಶಿಕ್ಷೆ ನೀಡುವ ಬದಲು ಜಿಲ್ಲಾಧಿಕಾರಿಗಳಿಗೆ ಶಿಕ್ಷೆ ನೀಡಿದೆ ಎಂದು ಖಾದರ್ ಟ್ವೀಟ್ ಮಾಡಿದ್ದಾರೆ.

ಇಂಥಹ ಪರಿಸ್ಥಿತಿಯಲ್ಲಿ ಅಧಿಕಾರಿಗಳಿಗೆ ಧೈರ್ಯ ತುಂಬ ಬೇಕಿತ್ತು. ಆದರೆ ಇಲ್ಲಿನ ಬಿಜೆಪಿ ಮುಖಂಡರು ರಾಜಕೀಯ ಮೇಲಾಟ ಮಾಡುತ್ತಿದ್ದಾರೆ. ಕೊರೋನಾದಿಂದ ಜನರ ನರಳುತ್ತಿರುವ ಈ ಪರಿಸ್ಥಿತಿಯಲ್ಲಿ, ಬಿಜೆಪಿಗರು ಅಧಿಕಾರಿಗಳ ಉಸಿರುಗಟ್ಟಿಸಿದ್ದಾರೆ. ಇದಕ್ಕೆ ಸರ್ಕಾರ ಉತ್ತರಿಸಬೇಕು ಎಂದು ಟ್ವಿಟರ್ ನಲ್ಲಿ ಡಿಸಿ ವರ್ಗಾವಣೆ ವಿರುದ್ದ ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here