ದಕ್ಷಿಣ ಕನ್ನಡ ಜಿಲ್ಲೆಯ ಡಿಸಿಯಾಗಿದ್ದ ಸಿಂಧೂ ಬಿ. ರೂಪೇಶ್ ವರ್ಗಾವಣೆ ಮಾಡಲಾಗಿದೆ. ಕೆಲ ದಿನಗಳಿಂದ ಬಕ್ರೀದ್ ಮತ್ತು ಗೋ ಸಾಗಾಟದ ವಿಷಯದ ಬಗೆಗಿನ ಹೇಳಿಕೆಗಳಲ್ಲಿ ಸುದ್ದಿಯಾಗಿದ್ದ ಜಿಲ್ಲಾಧಿಕಾರಿಯನ್ನು ಇಂದು ವರ್ಗಾವಣೆ ಮಾಡಲಾಗಿದೆ.
ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಬೆಳಗಾವಿ ಜಿಲ್ಲಾಪಂಚಾಯತ್ ನಲ್ಲಿ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ರಾಜೇಂದ್ರ ಕೆ.ವಿಯವರನ್ನು ನೇಮಕ ಮಾಡಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಿಂಧು ಬಿ ರೂಪೇಶ್ ಅವರು ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ Electronic Delivery of Citizen Services (EDCS) ನ ಡೈರೆಕ್ಟರ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.