ದ.ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಿಗೆ ಕೊರೋನಾ!

0
188
Tap to know MORE!

ದಕ್ಷಿಣ ಕನ್ನಡದಲ್ಲಿ ಕೊರೋನಾ ಹಾವಳಿ ಹೆಚ್ಚಾಗುತ್ತಿದೆ. ಏತನ್ಮಧ್ಯೆ ಇಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಿಗೆ ಕೊರೋನಾ ಇರುವುದು ವರದಿಯಾಗಿದೆ. ಇದರ ಬಗ್ಗೆ ಖುದ್ದಾಗಿ ಅವರೆ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೊಂಡಿದ್ದಾರೆ.

ನನ್ನಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ ಮತ್ತು ನಾನು ಬೆಂಗಳೂರಿನಲ್ಲಿ ಕ್ಯಾರೆಂಟೈನ್ ನಲ್ಲಿದ್ದೇನೆ. ನಿಮ್ಮ ಎಲ್ಲಾ ಪ್ರೀತಿ ಮತ್ತು ಆಶೀರ್ವಾದಗಳೊಂದಿಗೆ, ನಾನು ಚೇತರಿಸಿಕೊಳ್ಳುತ್ತೇನೆ ಮತ್ತು ಶೀಘ್ರದಲ್ಲೇ ನಿಮ್ಮ ಸೇವೆಗೆ ಮರಳುತ್ತೇನೆ ಎಂದಿದ್ದಾರೆ.

ಅದಲ್ಲದೆ, ಕಳೆದ ಕೆಲವು ದಿನಗಳಲ್ಲಿ ಅವರೊಂದಿಗೆ ಸಂಪರ್ಕದಲ್ಲಿದ್ದ ಎಲ್ಲರಲ್ಲೂ ಕೊರೋನಾ ಪರೀಕ್ಷೆಗೆ ಒಳಪಡಲು ಅವರು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here