ಇಂದು ಒಂದೇ ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನವೈರಸ್ನಿಂದ ಮೂವರು ಮೃತಪಟ್ಟಿರುವುದು ವರದಿಯಾಗಿದೆ.
ಮೃತರನ್ನು ಉಳ್ಳಾಲ ಮೂಲದ 62 ವರ್ಷದ ಮಹಿಳೆ, ಪುತ್ತೂರಿನ 32 ವರ್ಷದ ಮಹಿಳೆ ಮತ್ತು ಭಟ್ಕಳ ಮೂಲದ 60 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಜಿಲ್ಲಾ ಕೋವಿಡ್ ಆಸ್ಪತ್ರೆಯ ವೆನ್ಲಾಕ್ನಲ್ಲಿ ಇಬ್ಬರು ಮಹಿಳೆಯರು ತೀರಿಕೊಂಡರೆ, ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಎಲ್ಲಾ ಮೂವರು ಬೇರೆ ಬೇರೆ ಖಾಯಿಲೆಗಳಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ICU ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದರೊಂದಿಗೆ, ಜಿಲ್ಲೆಯಲ್ಲಿ ಕೊರೊನ ಸೋಂಕಿನಿಂದ ಬಲಿಯಾದವರ ಸಂಖ್ಯೆ 29 ಕ್ಕೆ ಏರಿಕೆಯಾಗಿದೆ.
ಮಂಗಳವಾರದ ಜಿಲ್ಲಾ ಬುಲೆಟಿನ್ ಪ್ರಕಾರ, ಜಿಲ್ಲೆಯಲ್ಲಿ ಇದುವರೆಗೆ 1,359 ಕೊರೊನವಿರಸ್ ಸೋಂಕಿತರ ವರದಿಯಾಗಿದ್ದು, 683 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿರುತ್ತಾರೆ.