ಜುಲೈ 19 ರ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ಡೌನ್ ಜಾರಿಯಲ್ಲಿರುತ್ತದೆ. ವೇಗವಾಗಿ ಹರಡುತ್ತಿರುವ ಕೊರೊನಾವೈರಸ್ ಸೋಂಕನ್ನು ನಿಯಂತ್ರಿಸುವ ಸಲುವಾಗಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.
ಎಂದಿನಂತೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಭಾನುವಾರವು, ಬೆಳಿಗ್ಗೆ 8 ರಿಂದ 11 ರವರೆಗೆ ಅಗತ್ಯ ವಸ್ತುಗಳ ಅಂಗಡಿಗಳನ್ನು ತೆರೆಯಲು ಸಹ ಅವಕಾಶ ಇರುವುದಿಲ್ಲ. ವಿರಾಮ ಇರುವುದಿಲ್ಲ.
ಆದರೂ, ಆರೋಗ್ಯ ಸೇವೆಯಂತಹ ತುರ್ತು ಸೇವೆಗಳು ಲಭ್ಯವಿರುತ್ತವೆ. ವಾಹನಗಳು ರಸ್ತೆಗಿಳಿಯುವಂತಿಲ್ಲ.
ಜಿಲ್ಲೆಯಲ್ಲಿ ವೇಗವಾಗಿ ಹರಡುತ್ತಿರುವ ಕೊರೋನವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 16 ರಿಂದ ಒಂದು ವಾರದವರೆಗೆ ಲಾಕ್ಡೌನ್ ಘೋಷಿಸಲಾಗಿತ್ತು.