ನಾಗರ ಪಂಚಮಿ : ಸಾರ್ವಜನಿಕ ಆಚರಣೆಗಳಿಗೆ ನಿರ್ಬಂಧ – ಕೋಟ

0
173
Tap to know MORE!

ಮಂಗಳೂರು : ಕರಾವಳಿಯಲ್ಲಿ ನಾಗರಪಂಚಮಿಗೆ ವಿಶೇಷ ಮಹತ್ವವಿದ್ದರೂ, ಈ ಬಾರಿ ಕೊರೋನಾ ಭೀತಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಪಂಚಮಿಯ ಆಚರಣೆಗೆ ನಿರ್ಬಂಧ ಹೇರಲಾಗಿದೆ. ಜನ ತಮ್ಮ ತಮ್ಮ ಮನೆಯಲ್ಲಿರುವ ನಾಗನ ಕಲ್ಲುಗಳಿಗೆ ತನು ಎರೆಯುವ ಮೂಲಕ ನಾಗರ ಪಂಚಮಿಯನ್ನು ಆಚರಿಸಲು ಅವಕಾಶ ಮಾಡಿಕೊಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ.

ಧಾರ್ಮಿಕ ಕ್ಷೇತ್ರಗಳಲ್ಲಿ ದೇವರಿಗೆ ವಿವಿಧ ರೀತಿಯ ಸೇವೆಗಳನ್ನು ನೀಡಬೇಕೆಂಬ ಇಚ್ಛೆ ಎಲ್ಲಾ ಭಕ್ತರಲ್ಲೂ ಇದೆ. ಆದರೆ, ಕೊರೋನಾ ರೋಗದ ಹಿನ್ನಲೆಯಲ್ಲಿ ಸರಕಾರ ಅನಿವಾರ್ಯವಾಗಿ ಕೇವಲ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಿದೆ. ಸದ್ಯಕ್ಕೆ ಎಲ್ಲಾ ಕ್ಷೇತ್ರಗಳಲ್ಲೂ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಯಾವುದೇ ಸೇವೆಗಳಿಗೆ ಅವಕಾಶವಿಲ್ಲ. ಕ್ಷೇತ್ರಗಳಲ್ಲಿ ಸೇವೆಗಳನ್ನು ಆರಂಭಿಸುವ ಕುರಿತು ಆರೋಗ್ಯ ಇಲಾಖೆ ಮತ್ತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದ ಬಳಿಕವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

LEAVE A REPLY

Please enter your comment!
Please enter your name here