ನಾಳೆ ಪ್ರಕಟಗೊಳ್ಳಲಿದೆ ದ್ವಿತೀಯ ಪಿಯುಸಿ ಫಲಿತಾಂಶ : ಸುರೇಶ್ ಕುಮಾರ್

0
84

ರಾಷ್ಟ್ರಾದ್ಯಂತ ಮಾರ್ಚ್ ತಿಂಗಳಿನಲ್ಲಿ ಜಾರಿಯಾದ ಲಾಕ್ಡೌನ್ ಕಾರಣದಿಂದಾಗಿ ಮುಂದೂಡಲ್ಪಟ್ಟ ಇಂಗ್ಲಿಷ್ ಪರೀಕ್ಷೆ, ಕೊರೋನಾ ಭೀತಿಯ ನಡುವೆಯೂ, ಕಳೆದ ತಿಂಗಳಷ್ಟೇ ಯಶಸ್ವಿಯಾಗಿ ನಡೆಸಲಾಗಿತ್ತು. ಜುಲೈ 20ರ ಸುಮಾರಿಗೆ ಫಲಿತಾಂಶ ಬಿಡುಗಡೆ ಮಾಡುವ ಬಗ್ಗೆ ಹೇಳಿದ್ದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಇದೀಗ ನಾಳೆ ಮಧ್ಯಾಹ್ನ ಫಲಿತಾಂಶ ಬಿಡುಗಡೆ ಆಗಲಿದೆ ಎಂದು ಹೇಳಿದ್ದಾರೆ.

ನಾಳೆ ಬೆಳಿಗ್ಗೆ 11.30ಕ್ಕೆ ವಿದ್ಯಾರ್ಥಿಗಳ ಮೊಬೈಲ್ ಗೆ ಫಲಿತಾಂಶ ತಲುಪಲಿದೆ. ಈ ಮೂಲಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾಹಿತಿ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಇತ್ತೀಚೆಗೆ ಮುಕ್ತಾಯಗೊಂಡಿದ್ದಂತ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟಗೊಳ್ಳಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆದಂತ ಪ್ರತಿ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಫಲಿತಾಂಶದ ವಿವರ ಬರಲಿದೆ ಎಂಬುದಾಗಿ ತಿಳಿಸಿದ್ದಾರೆ.

ಪೂರಕ ಪರೀಕ್ಷೆಗಳಿಲ್ಲದೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪಾಸ್

ರಾಜ್ಯದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಜುಲೈ 15 ರಿಂದ 27 ರ ಒಳಗಾಗಿ ನಡೆಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆಯಲ್ಲಿ ಸೂಚಿಸಿತ್ತು. ಆದ್ರೇ ಇದೀಗ ಈ ಪೂರಕ ಪರೀಕ್ಷೆಯನ್ನು ಕೈಬಿಟ್ಟಿರುವ ಶಿಕ್ಷಣ ಇಲಾಖೆ, ರಾಜ್ಯದ ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಪೂರಕ ಪರೀಕ್ಷೆ ಇಲ್ಲದಂತೆ ಮುಂದಿನ ತರಗತಿಗೆ ಪಾಸ್ ಮಾಡುವಂತೆ ಆದೇಶ ಹೊರಡಿಸಿದೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ಕೋವಿಡ್-19 ಸಂದರ್ಭದಲ್ಲಿ ಪೂರಕ ಪರೀಕ್ಷೆ ನಡೆಸುವುದು ಸೂಕ್ತವಲ್ಲವೆಂಬ ಅಭಿಪ್ರಾಯಕ್ಕೆ ಬರಲಾಗಿದೆ. ಹೀಗಾಗಿ ಪ್ರಥಮ ಪಿಯುಸಿಯಲ್ಲಿ ಅನುತ್ತೀರ್ಣರಾದಂತ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಪೂರಕ ಪರೀಕ್ಷೆ ಇಲ್ಲದೇ ಪಾಸ್ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂಬುದಾಗಿ ತಿಳಿಸಿದರು.

“ಇನ್ನೂ ಪ್ರಥಮ ಪಿಯುಸಿಯ ಒಂದೂ ಪರೀಕ್ಷೆ ಬರೆಯದ ವಿದ್ಯಾರ್ಥಿಗಳಿಗೆ ಮತ್ತು ಹಾಜರಾತಿಯ ಕೊರತೆ ಇರುವ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಯ ವೇಳೆಯಲ್ಲಿ ಒಂದು ಪರೀಕ್ಷೆ ನೀಡಲಾಗುತ್ತದೆ. ಅದರ ಆಧಾರದ ಮೇಲೆ ಪಾಸ್ ಮಾಡಲಾಗುತ್ತದೆ. ಈ ಮೂಲಕ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ ಮುಂದಿನ ತರಗತಿಗೆ ತೇರ್ಗಡೆ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ” ಎಂಬುದಾಗಿ ಹೇಳಿದರು.

LEAVE A REPLY

Please enter your comment!
Please enter your name here