ನಾಳೆ ಸರ್ವಪಕ್ಷ ಸಭೆ ಕರೆದ ಮುಖ್ಯಮಂತ್ರಿ ಯಡಿಯೂರಪ್ಪ

0
157
Tap to know MORE!

ಬೆಂಗಳೂರಿನಲ್ಲಿ ಕೋವಿಡ್ -19 ಪ್ರಕರಣಗಳು ಆತಂಕಕಾರಿ ಸಂಖ್ಯೆಯಲ್ಲಿ ಹೆಚ್ಚುತ್ತಲೇ ಇರುವುದರಿಂದ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಶುಕ್ರವಾರ ಸರ್ವಪಕ್ಷ ಸಭೆ ಕರೆದಿದ್ದಾರೆ.

ವಿಧಾನ ಸೌಧದಲ್ಲಿ, ಬೆಂಗಳೂರಿನಲ್ಲಿರುವ ತಮ್ಮದೇ ಪಕ್ಷದ ನಾಯಕರನ್ನು ಭೇಟಿಯಾದ ನಂತರ ಅವರು, “ಬೆಂಗಳೂರಿನಲ್ಲಿ ಕೊರೋನವೈರಸ್ ಹರಡುವುದನ್ನು ನಿಯಂತ್ರಿಸುವ ಕಾರ್ಯತಂತ್ರವನ್ನು ನಾನು ನಗರದ ಎಲ್ಲ ಪಕ್ಷಗಳ ಸಚಿವರು ಮತ್ತು ಶಾಸಕರೊಂದಿಗೆ ಚರ್ಚಿಸುತ್ತೇನೆ. ದೇಶದ ಇತರ ನಗರಗಳಿಗೆ ಹೋಲಿಸಿದರೆ, ಕೋವಿಡ್ 19 ಪ್ರಕರಣಗಳನ್ನು ನಿಯಂತ್ರಿಸುವಲ್ಲಿ ಒಂದು ಮಾದರಿ ನಗರ ಬೆಂಗಳೂರು. ಆದಾಗ್ಯೂ, ಕಳೆದ 16 ದಿನಗಳಿಂದ ಹೊಸ ಪ್ರಕರಣಗಳ ಸಂಖ್ಯೆ ಭಾರಿ ಏರಿಕೆ ಕಾಣುತ್ತಿದೆ.

ನಾಗರಿಕರು ತಮ್ಮ ಮನೆಗಳಿಂದ ಹೊರಬರುವಾಗ ಹೆಚ್ಚು ಜಾಗರೂಕರಾಗಿರಬೇಕು ಎಂದು ಅವರು ಕೋರಿದರು ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ವಿನಂತಿಸಿದರು. “ನಾಗರಿಕರು ಸರ್ಕಾರದೊಂದಿಗೆ ಸಹಕರಿಸಬೇಕು ಮತ್ತು ನಗರದಲ್ಲಿ ಮತ್ತೊಂದು ಲಾಕ್ಡೌನ್ ಹೇರಬಾರದು ಎಂದಾದರೆ, ಎಲ್ಲಾ ಮಾರ್ಗಸೂಚಿಗಳನ್ನು ಅನುಸರಿಸಬೇಕು” ಎಂದು ಅವರು ಹೇಳಿದರು.

LEAVE A REPLY

Please enter your comment!
Please enter your name here