ನಿಗದಿಯಂತೆ ಜುಲೈ 30-31 ರಂದು ಸಿಇಟಿ ಪರೀಕ್ಷೆ : ಡಿಸಿಎಂ

0
171
Tap to know MORE!

ಕೊರೋನಾ ಆತಂಕದ ನಡುವೆಯೇ ಎಸ್​ಎಸ್​ಎಲ್​ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿರುವ ರಾಜ್ಯ ಸರ್ಕಾರ, ಇದೀಗ ಸಿಇಟಿ ಪರೀಕ್ಷೆ ನಡೆಸಲು ಮುಂದಾಗಿದೆ. ಅದರಂತೆ ರಾಜ್ಯದಲ್ಲಿ ಇದೇ ಜುಲೈ 30 ಮತ್ತು 31ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಈ ಮೂಲಕ ಕೊರೋನಾ ಬಿಕ್ಕಟ್ಟಿನ ನಡುವೆಯೂ ದೇಶದಲ್ಲೇ ಮೊದಲ ಬಾರಿಗೆ ಸಿಇಟಿ ಆರಂಭಿಸಿದ ರಾಜ್ಯ ಕರ್ನಾಟಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

ನಿಗದಿಯತೆ ರಾಜ್ಯದಲ್ಲಿ ಸಿಇಟಿ ಪರೀಕ್ಷೆ ನಡೆಯಲಿದೆ. ಒಟ್ಟು 127 ಸ್ಥಳಗಳ 497 ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ. 1,94,356 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲಾಧಿಕಾರಿಗಳ ಮೇಲುಸ್ತುವಾರಿಯಲ್ಲಿ ಪರೀಕ್ಷೆ ನಡೆಯಲಿದೆ.

ಕೊರೋನಾ ಪಾಸಿಟಿವ್ ವಿದ್ಯಾರ್ಥಿಗಳಿಗೂ ಅವಕಾಶ
ಕೋವಿಡ್ ಪಾಸಿಟಿವ್ ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆ ಬರೆಯಲು ಅವಕಾಶವಿದೆ. ಅವರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು. ಜಿಲ್ಲಾಧಿಕಾರಿಗಳಿಗೆ ಪರೀಕ್ಷೆಯ ಸಂಪೂರ್ಣ ಹೊಣೆ ನೀಡಲಾಗಿದೆ. ಆಯಂಬುಲೆನ್ಸ್ ಸೇರಿ ಎಲ್ಲಾ ತುರ್ತು ಅಗತ್ಯ ಸೇವೆ ಇರಲಿದೆ.

ಸಕಲ ಸಿದ್ಧತೆ ಮತ್ತು ಮುನ್ನೆಚ್ಚರಿಕೆ:
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರಕಾರ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಉಸ್ತುವಾರಿಯಲ್ಲಿ ಎಲ್ಲ ಮುನ್ನೆಚ್ಚರಿಕೆಗಳನ್ನು ಕೈಗೊಂಡಿದೆ. ಈಗಾಗಲೇ ಎಸ್‌ಒಪಿ (Standard operating procedure) ರಚಿಸಲಾಗಿದೆ. ಥರ್ಮಲ್ ಸ್ಕ್ರೀನಿಂಗ್, ಮಾಸ್ಕ್, ದೈಹಿಕ ಅಂತರವನ್ನು ಸೇರಿದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು. ಎರಡು ದಿನಗಳ ಮುಂಚೆಯೇ ಕೇಂದ್ರಗಳನ್ನ ಸ್ಯಾನಿಟೈಸ್ ಮಾಡಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

LEAVE A REPLY

Please enter your comment!
Please enter your name here