BREAKING : ಬಿಹಾರದ ಮುಖ್ಯಮಂತ್ರಿಯಾಗಿ ಸತತ ನಾಲ್ಕನೇ ಅವಧಿಗೆ ನಿತೀಶ್ ಕುಮಾರ್ ಆಯ್ಕೆ | ನಾಳೆ ಪ್ರಮಾಣವಚನ ಸ್ವೀಕಾರ

0
129
Tap to know MORE!

ಜನತಾ ದಳ (ಯುನೈಟೆಡ್) {ಜೆಡಿಯು} ಮುಖಂಡ ನಿತೀಶ್ ಕುಮಾರ್ ಅವರು ಎನ್‌ಡಿಎ  ಮೈತ್ರಿಕೂಟದ ನಾಯಕರಾಗಿ ಆಯ್ಕೆಯಾಗಿದ್ದು, ಸತತ ನಾಲ್ಕನೇ ಅವಧಿಗೆ ಬಿಹಾರ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶಗಳ ಕುರಿತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಸಭೆಗಾಗಿ ರಕ್ಷಣಾ ಸಚಿವ ಮತ್ತು ಬಿಜೆಪಿಯ ಹಿರಿಯ ಮುಖಂಡ ರಾಜನಾಥ್ ಸಿಂಗ್ ಅವರು ನಿತೀಶ್ ಕುಮಾರ್ ಅವರ ನಿವಾಸಕ್ಕೆ ಆಗಮಿಸಿದ ನಂತರ ಈ ನಿರ್ಧಾರವನ್ನು ಪ್ರಕಟಿಸಲಾಗಿದೆ.

ಇದನ್ನೂ ಓದಿ: ಬಿಹಾರದಲ್ಲಿ ಅರಳಿದ ಕಮಲ | ಎನ್‌ಡಿಎಗೆ ಸ್ಪಷ್ಟ ಬಹುಮತ

ಈ ಮೊದಲು, ಜೆಡಿಯು ಮುಖಂಡ ನಿತೀಶ್ ಕುಮಾರ್ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎಂದು ನಿರ್ಧರಿಸುವಲ್ಲಿ ನವೆಂಬರ್ 15 ರಂದು ನಡೆಯುವ ಸಭೆ ನಿರ್ಣಾಯಕವಾಗಲಿದೆ ಎಂದು ಸುಳಿವು ನೀಡಿದ್ದರು.

LEAVE A REPLY

Please enter your comment!
Please enter your name here