ವಿಶ್ವದ 100 ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್ ಸೇರಿದಂತೆ 3 ಭಾರತೀಯರಿಗೆ ಸ್ಥಾನ!

0
123
Tap to know MORE!

ನವದೆಹಲಿ: ಫೋರ್ಬ್ಸ್‌ನ ವಿಶ್ವದ 100 ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದ್ದಾರೆ. 61 ವರ್ಷದ ಸೀತಾರಾಮನ್ 41 ನೇ ಸ್ಥಾನದಲ್ಲಿದ್ದಾರೆ. ಎಚ್‌ಸಿಎಲ್ ಕಾರ್ಪೊರೇಶನ್ ಸಿಇಒ ಮತ್ತು ಕಾರ್ಯನಿರ್ವಾಹಕ ನಿರ್ದೇಶಕಿ ರೋಶ್ನಿ ನಾಡರ್ ಮಲ್ಹೋತ್ರಾ ಮತ್ತು ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜೂಮ್ದಾರ್ ಕೂಡ ಈ ಪಟ್ಟಿಯಲ್ಲಿದ್ದಾರೆ.

ಜರ್ಮನ್ ಚಾನ್ಸೆಲರ್ ಏಂಜೆಲಾ ಮರ್ಕೆಲ್ ಸತತ 10 ನೇ ವರ್ಷವೂ ನಂ. 1 ಸ್ಥಾನ ಪಡೆದುಕೊಂಡಿದ್ದಾರೆ, ಯುರೋಪಿಯನ್ ಸೆಂಟ್ರಲ್ ಬ್ಯಾಂಕ್ ಮುಖ್ಯಸ್ಥೆ ಕ್ರಿಸ್ಟೀನ್ ಲಾಗಾರ್ಡ್ ಸತತ ಎರಡನೇ ವರ್ಷ ಎರಡನೇ ಸ್ಥಾನದಲ್ಲಿದ್ದಾರೆ. ಯುಎಸ್ ನಿಯೋಜಿತ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮೊದಲ ಬಾರಿಗೆ ಈ ಪಟ್ಟಿಯಲ್ಲಿ ನಂ.3 ಸ್ಥಾನ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: 15 ವರ್ಷದ ಇಂಡೋ-ಅಮೇರಿಕನ್ ಗೀತಾಂಜಲಿ ರಾವ್ ಟೈಮ್ಸ್ “ಕಿಡ್ ಆಫ್ ದ ಇಯರ್” ಆಗಿ ಆಯ್ಕೆ

ಮೇ 2019 ರಲ್ಲಿ ಸೀತಾರಾಮನ್ ಅವರನ್ನು ಭಾರತದ ಹಣಕಾಸು ಮಂತ್ರಿಯಾಗಿ ನೇಮಿಸಲಾಯಿತು. ಅವರು ಭಾರತದ ಮೊದಲ ಪೂರ್ಣ ಅವಧಿಯ ಮಹಿಳಾ ಹಣಕಾಸು ಮಂತ್ರಿ ಎಂಬ ಹೆಗ್ಗಳಿಕೆ ಪಡೆದಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ರೋಶ್ನಿ ನಾಡರ್ ಮಲ್ಹೋತ್ರಾ ಅವರು ಫೋರ್ಬ್ಸ್ 2020 ರ ‘ವಿಶ್ವದ 100 ಅತ್ಯಂತ ಪ್ರಭಾವಿ ಮಹಿಳೆಯರ’ ಪಟ್ಟಿಯಲ್ಲಿ 55 ನೇ ಸ್ಥಾನವನ್ನು ಪಡೆದಿದ್ದಾರೆ.

LEAVE A REPLY

Please enter your comment!
Please enter your name here