ಬೆಂಗಳೂರು: ನಾಳೆಯಿಂದ ಮೇ 3 ರವರೆಗೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂಬ ಆದೇಶ ನಕಲಿ ಎಂದು ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮಗಳಲ್ಲಿ ರಾತ್ರಿ 9 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿ ಎಂಬ ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ರವಿಕುಮಾರ್ ಅವರು, ರಾಜ್ಯ ಸರ್ಕಾರ ಅಧಿಕೃತವಾಗಿ ಯಾವುದೇ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿಲ್ಲ ಮತ್ತು 9 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿ ಎಂಬ ಆದೇಶ ನಕಲಿ ಎಂದು ಹೇಳಿದ್ದಾರೆ.
ನಾಳೆ ರಾಜ್ಯಪಾಲರ ನೇತೃತ್ವದಲ್ಲಿ ನಡೆಯಲಿರುವ ಸರ್ವಪಕ್ಷ ಸಭೆಯ ನಂತರ ಮುಖ್ಯಮಂತ್ರಿಗಳು ಅಧಿಕೃತವಾಗಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದ್ದಾರೆ ಎಂದು ರವಿಕುಮಾರ್ ತಿಳಿಸಿದ್ದಾರೆ.