ಪಕ್ಷಿಕೆರೆ : ಸ್ವಚ್ಛೋತ್ಸವ-ನಿತ್ಯೋತ್ಸವ ಮಾಸಾಚರಣೆ ಕಾರ್ಯಕ್ರಮ ಅನುಷ್ಠಾನಗೊಳಿಸುವ ಅಂಗವಾಗಿ ಅಕ್ಟೋಬರ್ 11 ರಂದು ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಲ್ಲಿ ಶ್ರೀ ವಿನಾಯಕ ಮಿತ್ರ ಮಂಡಳಿ(ರಿ) ಪಕ್ಷಿಕೆರೆ ನೇತೃತ್ವದಲ್ಲಿ “ಸ್ವಚ್ಛತೆಯ ಜನ ಜಾಗ್ರತಿಗಾಗಿ ಬೈಕ್ ರ್ಯಾಲಿ” ಹಮ್ಮಿಕೊಳ್ಳಲಾಗಿತ್ತು.
ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ತಾಲೂಕು ಪಂಚಾಯತ್, ಕೆಮ್ರಾಲ್ ಗ್ರಾಮ ಪಂಚಾಯತ್, ಸ್ವಚ್ಛ ಭಾರತ್ ಮಿಷನ್(ಗ್ರಾ) ಇದರ ಜಂಟಿ ಆಶ್ರಯದಲ್ಲಿ ಅಕ್ಟೋಬರ್ 2 ರಿಂದ ಅಕ್ಟೋಬರ್ 31ರವರೆಗೆ ಸ್ವಚ್ಛೋತ್ಸವ-ನಿತ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇದನ್ನೂ ನೋಡಿ : ಪಕ್ಷಿಕೆರೆ : ಸ್ವಚ್ಛೋತ್ಸವ – ನಿತ್ಯೋತ್ಸವ ಮಾಸಾಚರಣೆಗೆ ಚಾಲನೆ
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಕಸ್ತೂರಿ ಪಂಜ ಅವರು ನೆರವೇರಿಸಿದರು, ಆಡಳಿತಾಧಿಕಾರಿ ಶ್ರೀ ಸಚಿನ್ ಕುಮಾರ್, ಧಾರ್ಮಿಕ ದತ್ತಿ ಇಲಾಖೆ ಸದಸ್ಯರು ಆದ ಶ್ರೀ ಭುವನಾಭಿರಾಮ ಉಡುಪ ಇವರು ಈ ಕಾರ್ಯಕ್ರಮಕ್ಕೆ ಶುಭಕೋರಿದರು.
ಬೈಕ್ ರ್ಯಾಲಿಯು ಕೆಮ್ರಾಲ್ ಗ್ರಾಮ ಪಂಚಾಯಿತಿಯಿಂದ ಹೊರಟು ಹೊಸಕಾಡು ಮಾರ್ಗವಾಗಿ- ಪದ್ಮನೂರು-ಬಟ್ಟಕೊಡಿ-ನಡುಗೋಡು-ಸುರಗಿರಿ ದೇವಸ್ಥಾನವಾಗಿ-ಪಕ್ಷಿಕೆರೆ ಮಾರ್ಗವಾಗಿ-ಕಾಪಿಕಾಡು-ಪಂಜ ಕೊನೆಗೆ ಪಕ್ಷಿಕೆರೆಗೆ ಬಂದು ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಮಾಜಿ ಪಂ.ಅಧ್ಯಕ್ಷರಾದ ಶ್ರೀ ನಾಗೇಶ್ ಬೊಳ್ಳೂರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಶ್ರೀ ಅರುಣ್ ಪ್ರದೀಪ್ ಡಿಸೋಜಾ, ಕಾರ್ಯದರ್ಶಿ ಶ್ರೀ ಕೇಶವ್, ಸಾಮಾಜಿಕ ಸೇವಾಕರ್ತರಾದ ಶ್ರೀ ನಿತಿನ್ ವಾಸ್, ಮಂಡಳಿಯ ಗೌರವಾಧ್ಯಕ್ಷರಾದ ಶ್ರೀ ಧನಂಜಯ ಪಿ ಶೆಟ್ಟಿಗಾರ್, ಅಧ್ಯಕ್ಷರಾದ ಶ್ರೀ ಯಜ್ಞೇಶ್.ಪಿ ಶೆಟ್ಟಿಗಾರ್, ಪ್ರಧಾನ ಕಾರ್ಯದರ್ಶಿಯಾದ ಶ್ರೀ ಧನರಾಜ್ ಅಂಚನ್ ಹಾಗೂ ಸದಸ್ಯರು ಭಾಗವಹಿಸಿದರು.