ಪಕ್ಷಿಕೆರೆ: ಕಿಂಡಿ ಅಣೆಕಟ್ಟಿಗೆ ಹಲಗೆ ಹಾಕುವ ಕಾರ್ಯಕ್ರಮ

0
136
Tap to know MORE!

ಪಕ್ಷಿಕೆರೆ: ಶ್ರೀ ವಿನಾಯಕ ಮಿತ್ರ ಮಂಡಳಿ(ರಿ) ಪಕ್ಷಿಕೆರೆ ಇದರ ನೇತೃತ್ವದಲ್ಲಿ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪಡುಪಣಂಬೂರು ಗ್ರಾಮ ಪಂಚಾಯತ್ ಇದರ ಸಂಯುಕ್ತ ಆಶ್ರಯದಲ್ಲಿ 10ನೇ ತೋಕೂರು ಗ್ರಾಮದ ಕಂಬಳಬೆಟ್ಟುವಿನ ಪರಂಬೋಕು ತೋಡಿನ ಕಿಂಡಿ ಅಣೆಕಟ್ಟಿಗೆ ಹಲಗೆ ಹಾಕುವ ಕಾರ್ಯ ಭಾನುವಾರ ನಡೆಯಿತು.

ಇದನ್ನೂ ಓದಿ: ಪಕ್ಷಿಕೆರೆ : ಸ್ವಚ್ಛತೆಯ ಜನಜಾಗೃತಿಗಾಗಿ ಬೈಕ್ ರ್ಯಾಲಿ

ಈ ಶ್ರಮದಾನದಲ್ಲಿ ಪಡುಪಣಂಬೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶ್ರೀ ಹೇಮನಾಥ್ ಅಮೀನ್, ಪಂಚಾಯತ್ ಕಾರ್ಯದರ್ಶಿ ಶ್ರೀ ಲೋಕನಾಥ್, ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು, ಹಾಗೂ ಮಂಡಳಿಯ ಅಧ್ಯಕ್ಷರಾದ ಶ್ರೀ ಯಜ್ಞೆಶ್ ಪಿ ಶೆಟ್ಟಿಗಾರ್, ಕಾರ್ಯದರ್ಶಿಯಾದ ಶ್ರೀ ಧನು ಅಂಚನ್ ಹಾಗೂ ಸದಸ್ಯರು ಭಾಗವಹಿಸಿದರು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here