ರಾಜ್ಯದಲ್ಲೂ ಪಟಾಕಿ ನಿಷೇಧ | ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಿದೆ ರಾಜ್ಯ ಸರ್ಕಾರ

0
133
ಪಟಾಕಿ ನಿಷೇಧ, ಸುದ್ದಿವಾಣಿ
Tap to know MORE!

ಬೆಂಗಳೂರು: ಕೋವಿಡ್ ಕಾರಣದಿಂದ ಈ ಬಾರಿ ದೀಪಾವಳಿಯ ಸಮಯದಲ್ಲಿ ಪಟಾಕಿ ಹೊಡೆಯುವುದನ್ನು ನಿಷೇಧಿಸಲಾಗಿದೆ ಎಂದು ಮುಖ್ಯಮಂತ್ರ ಬಿ ಎಸ್ ಯಡಿಯೂರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ದೀಪಾವಳಿ ಹಬ್ಬದ ವೇಳೆ ಪಟಾಕಿ ಮಾರುವಂತಿಲ್ಲ. ಯಾರೂ ಪಟಾಕಿ ಹೊಡೆಯುವಂತಿಲ್ಲ ಕೋವಿಡ್-19 ವೈರಸ್ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯದಲ್ಲಿ ಪಟಾಕಿ ನಿಷೇಧಿಸಲು ಮಹತ್ವದ ತೀರ್ಮಾನ ತೆಗೆದುಕೊಳ್ಳಲಿದ್ದು, ಶೀಘ್ರದಲ್ಲೇ ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಟಾಕಿ ಹೊಗೆಯಿಂದ ಕೊರೋನಾ ಸೋಂಕು ಮತ್ತಷ್ಟು ಹಬ್ಬಲಿದೆ: ಸಚಿವ ಡಾ| ಸುಧಾಕರ್

ಪಟಾಕಿ ಸೃಷ್ಟಿಸುವ ವಾಯು ಮಾಲಿನ್ಯ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಲು ಕಾರಣ ಆಗಬಹುದು. ಈ ನಿಟ್ಟಿನಲ್ಲಿ ಪಟಾಕಿ ನಿಷೇಧ ಮಾಡುವುದು ಉತ್ತಮ ಎಂಬ ಸಲಹೆಗಳು ಸರ್ಕಾರಕ್ಕೆ ತಜ್ಞರು ನೀಡಿದ್ದಾರೆ. ತಜ್ಞರ ಸಲಹೆಗಳನ್ನು ಪರಿಗಣಿಸಿ ಪಟಾಕಿ ನಿಷೇಧದ ಕುರಿತಾಗಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಆರೋಗ್ಯ ಸಚಿವ ಕೆ ಸುಧಾಕರ್ ಇತ್ತೀಚೆಗೆ ಹೇಳಿದ್ದರು.

ದಿಲ್ಲಿ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ ರಾಜ್ಯಗಳಲ್ಲೂ ಪಟಾಕಿ ನಿಷೇಧ ಮಾಡಿ ಅಲ್ಲಿನ ಸರ್ಕಾರಗಳು ಆದೇಶ ನೀಡಿದೆ. ಈ ಪಟ್ಟಿಗೆ ಇದೀಗ ಕರ್ನಾಟಕವೂ ಸೇರ್ಪಡೆಯಾಗಿದೆ.

LEAVE A REPLY

Please enter your comment!
Please enter your name here