ಜುಲೈ 26ರಿಂದ ಪದವಿ ಕಾಲೇಜು, ನಾಳೆಯಿಂದ ಥಿಯೇಟರ್, ರಂಗಮಂದಿರ ಓಪನ್ | ಸಿಎಂ ಸಂಪುಟ ಸಭೆಯಲ್ಲಿ ನಿರ್ಧಾರ

0
192
Tap to know MORE!

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಅನ್ ಲಾಕ್ 3.0 ನಾಳೆ (ಸೋಮವಾರ) ಅಂತ್ಯಗೊಳ್ಳಲಿದೆ. ಹೀಗಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಸಭೆ ನಡೆಸಿದರು.

ಸಿಎಂ ಇಂದು ತಮ್ಮ ನಿವಾಸದಲ್ಲಿ ಸಚಿವರು ಹಾಗು ಅಧಿಕಾರಿಗಳ ಜೊತೆ ಕೋವಿಡ್ -19, ಅನ್ ಲಾಕ್ 4 ರ ಕುರಿತು ಚರ್ಚೆ ನಡೆಸಿದರು. ಸಭೆಯಲ್ಲಿ ಉಪಮುಖ್ಯಮಂತ್ರಿ ಆಶ್ವಥ ನಾರಾಯಣ, ಸಚಿವರುಗಳಾದ ಆರ್. ಅಶೋಕ್, ಅರವಿಂದ ಲಿಂಬಾವಳಿ, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಅಂತಿಮ ವರ್ಷದ ಪದವಿ ಪರೀಕ್ಷೆ ಕಡ್ಡಾಯ | ಆಗಸ್ಟ್ 31 ರೊಳಗೆ ಪರೀಕ್ಷೆ | ಅಕ್ಟೋಬರ್ 1 ರಿಂದ ಹೊಸ ಶೈಕ್ಷಣಿಕ ವರ್ಷ: ಯುಜಿಸಿ

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ನಿರ್ಧಾರಗಳು:

  • ರಾತ್ರಿ 10 ರಿಂದ ಬೆಳಿಗ್ಗೆ 5ರ ವರೆಗೆ ನೈಟ್ ಕರ್ಫ್ಯೂ
  • ಶೇ.50ರಷ್ಟು ಪ್ರೇಕ್ಷಕರೊಂದಿಗೆ ಸಿನಿಮಾ ಥಿಯೇಟರ್, ರಂಗಮಂದಿರ ತೆರೆಯಲು ಅನುಮತಿ
  • ಪದವಿ ಹಾಗೂ ಮೇಲ್ಪಟ್ಟ ಕಾಲೇಜುಗಳನ್ನು ತೆರೆಯಲು ಅನುಮತಿ
  • ಕನಿಷ್ಟ ಒಂದು ಡೋಸ್ ಲಸಿಕೆ ಪಡೆದ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ

LEAVE A REPLY

Please enter your comment!
Please enter your name here