ರೈತರ ಪ್ರತಿಭಟನೆಗೆ ಬೆಂಬಲ – ಪದ್ಮವಿಭೂಷಣ ಪುರಸ್ಕಾರವನ್ನು ಹಿಂತಿರುಗಿಸಿದ ಮಾಜಿ ಮುಖ್ಯಮಂತ್ರಿ!

0
140
Tap to know MORE!

ನವದೆಹಲಿ, ಡಿಸೆಂಬರ್.03: ಕೃಷಿ ಸಂಬಂಧಿತ ಕಾಯ್ದೆ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರು ಪದ್ಮವಿಭೂಷಣ ಪ್ರಶಸ್ತಿಯನ್ನು ವಾಪಸ್ ನೀಡಿದ್ದಾರೆ.

ಇದನ್ನೂ ಓದಿ: ರೈತರು ಕೇವಲ ಉತ್ಪಾದಕರಲ್ಲ, ಉದ್ಯಮಿಗಳಾಗಿ ಬೆಳೆಯಬೇಕು : ಪ್ರಧಾನಿ ಮೋದಿ

ಕೇಂದ್ರ ಸರ್ಕಾರವು ಕೃಷಿ ಸಂಬಂಧಿತ ಕಾಯ್ದೆಗಳನ್ನು ಜಾರಿಗೊಳಿಸುವ ಮೂಲಕ ರೈತರಿಗೆ ಅನ್ಯಾಯ ಮಾಡುವುದಕ್ಕೆ ಹೊರಟಿದೆ. ರೈತರ ಪರವಾಗಿ ಬೆಂಬಲಿಸುವುದಕ್ಕೆ ಹಾಗೂ ರೈತರೊಂದಿಗೆ ನಾವಿದ್ದೇವೆ ಎಂದು ಒಗ್ಗಟ್ಟು ಪ್ರದರ್ಶಿಸುವುದಕ್ಕೆ ನನ್ನ ಬಳಿ ಏನೂ ಇಲ್ಲ. ಈ ವಿಷಯದಲ್ಲಿ ನಾನೂ ತೀರಾ ಬಡವನಾಗಿದ್ದು, ರೈತರ ಹೋರಾಟವನ್ನು ಬೆಂಬಲಿಸುವುದಕ್ಕಾಗಿ ತಾವು ಪಡೆದಿರುವ ಪದ್ಮವಿಭೂಷಣ ಗೌರವವನ್ನು ಕೇಂದ್ರ ಸರ್ಕಾರಕ್ಕೆ ವಾಪಸ್ ನೀಡುತ್ತಿದ್ದೇನೆ” ಎಂದು ಪಂಜಾಬ್ ಮಾಜಿ ಮುಖ್ಯಮಂತ್ರಿ ಮತ್ತು ಶಿರೋಮಣಿ ಅಕಾಲಿ ದಳದ ಮುಖಂಡ ಪ್ರಕಾಶ್ ಸಿಂಗ್ ಬಾದಲ್ ಹೇಳಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here