ರಾಜ್ಯದ ಪರಿಸ್ಥಿತಿ ಅವಲೋಕಿಸಿ, SSLC -PUC ಪರೀಕ್ಷೆ ಕುರಿತು ನಿರ್ಧಾರ: ಸಚಿವ ಸುರೇಶ್ ಕುಮಾರ್

0
124
Tap to know MORE!

ಬೆಂಗಳೂರು: ಸಿಬಿಎಸ್ಇ ಹನ್ನೆರಡನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಿದ್ದು, ಈ ಕುರಿತಂತೆ ರಾಜ್ಯದ ಪರಿಸ್ಥಿತಿ ಅವಲೋಕಿಸಿ ಶೀಘ್ರ ತೀರ್ಮಾನ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಕೇಂದ್ರೀಯ ಮಂಡಳಿಯು ಪರೀಕ್ಷೆ ರದ್ದು‌ ಮಾಡಿರುವ ಹಿನ್ನೆಲೆಯಲ್ಲಿ ಸುರೇಶ್ ಕುಮಾರ್ ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಈ ರೀತಿ ತಿಳಿಸಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಕೇಂದ್ರೀಯ ಮಂಡಳಿಯು ಪರೀಕ್ಷೆ ರದ್ದು‌ ಮಾಡಿರುವ ಹಿನ್ನೆಲೆ, ರಾಜ್ಯ ಪಠ್ಯಕ್ರಮ ಅನುಸರಿಸಿ‌ ಓದುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಸ್ಥಿತಿಗತಿಗಳು, ಮೌಲ್ಯಮಾಪನದ ಅವಶ್ಯಕತೆ‌ ಕುರಿತಂತೆ ಈಗಾಗಲೇ ರೂಪಿತವಾಗಿರುವ ಅಭಿಪ್ರಾಯಗಳ ವಿಸ್ತೃತ ಚರ್ಚೆ‌ ನಡೆಸಿ ವಿದ್ಯಾರ್ಥಿಗಳ ಆರೋಗ್ಯ ಹಾಗೂ ಭವಿಷ್ಯದ ಹಿತದೃಷ್ಟಿಯಿಂದ ಶೀಘ್ರದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here