ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ನಡೆದ ಸಾಧುಗಳ ಹತ್ಯೆ ಪ್ರಕರಣಕ್ಕೆ, ಸಂಬಂಧಿಸಿದಂತೆ ಬಂಧಿಸಲಾದ ಆರೋಪಿಗಳ ಪೈಕಿ 11 ಆರೋಪಿಗಳಲ್ಲಿ ಕೋರೋನಾ ಸೋಂಕು ಇರುವುದು ಇಂದು ದೃಢಪಟ್ಟಿದೆ. ಇದರಿಂದ ಪೊಲೀಸರು ಆಘಾತಕ್ಕೊಳಗಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
“ಆರೋಪಿಗಳನ್ನು ಶೀಘ್ರದಲ್ಲೇ ವಾಡಾ ಪೊಲೀಸ್ ಠಾಣೆ ಲಾಕಪ್ನಿಂದ ಜಿಲ್ಲಾಧಿಕಾರಿ ಸ್ಥಾಪಿಸುವ ತಾತ್ಕಾಲಿಕ ಜೈಲಿಗೆ ಸ್ಥಳಾಂತರಿಸಬೇಕಾಗಿತ್ತು, ಇದಕ್ಕಾಗಿ ಈ ಪೊಲೀಸ್ ಠಾಣೆಯಲ್ಲಿ ಕೋವಿಡ್ -19 ಪರೀಕ್ಷೆಗಳನ್ನು ನಡೆಸಲಾಯಿತು. ಇಂದು, 11 ಜನರ ಪರೀಕ್ಷಾ ವರದಿಗಳು ಪಾಸಿಟಿವ್ ಬಂದಿದೆ “ಎಂದು ಅಧಿಕಾರಿ ಹೇಳಿದರು.
ಪ್ರಸ್ತುತ, ಅವರನ್ನು ವಾಡಾದ ಪೊಶೇರಿಯಲ್ಲಿರುವ ಕೋವಿಡ್ ಕೇರ್ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ. ಆದರೆ ಶೀಘ್ರದಲ್ಲೇ ಅವರನ್ನು ಸ್ಥಳೀಯ ವೈದ್ಯಕೀಯ ಅಧಿಕಾರಿಗಳ ಸಲಹೆಯಂತೆ ಪಾಲ್ಘರ್ ಗ್ರಾಮೀಣ ಆಸ್ಪತ್ರೆಯ ಕೈದಿಗಳ ಪ್ರತ್ಯೇಕ ವಾರ್ಡ್ಗೆ ಸ್ಥಳಾಂತರಿಸಲಾಗುವುದು ಎಂದು ಅವರು ಹೇಳಿದರು.