ರಾಜ್ಯಾದ್ಯಂತ ಎಲ್ಲರಿಗೂ ಉಚಿತವಾಗಿ ಕೋವಿಡ್-19 ಲಸಿಕೆ ವಿತರಣೆ : ಪಿಣರಾಯಿ ವಿಜಯನ್

0
246
Tap to know MORE!

ತಿರುವನಂತಪುರಂ: ಕೇರಳದ ಎಲ್ಲರಿಗೂ ಕೋವಿಡ್ -19 ಲಸಿಕೆ ಉಚಿತವಾಗಿ ಲಭ್ಯವಾಗಲಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಹೇಳಿದ್ದಾರೆ.

“ಲಸಿಕೆಗಾಗಿ ಯಾರ ಮೇಲೂ ಶುಲ್ಕ ವಿಧಿಸಲಾಗುವುದಿಲ್ಲ. ಇದು ಸರ್ಕಾರದ ನಿಲುವು” ಎಂದು ಪಿಣರಾಯಿ ವಿಜಯನ್ ಅವರು ಕಣ್ಣೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಡಿ.16 ರಿಂದ ಮಂಗಳೂರು – ತಿರುವನಂತಪುರಂ ವಿಶೇಷ ರೈಲು

ತಮಿಳುನಾಡು ಮತ್ತು ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳು ಈಗಾಗಲೇ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ಘೋಷಣೆ ಮಾಡಿವೆ. ಈಗ ಕೇರಳ ಸಹ ಉಚಿತವಾಗಿ ಲಸಿಕೆ ನೀಡುವುದಾಗಿ ಹೇಳಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಕೇಂದ್ರದಿಂದ ರಾಜ್ಯಕ್ಕೆ ನೀಡಲಾಗುವ ಲಸಿಕೆಯ ಪ್ರಮಾಣ ಎಷ್ಟು ಎಂಬುದು ಇನ್ನೂ ತಿಳಿದುಬಂದಿಲ್ಲ. ಆದರೆ ಕೋವಿಡ್-19 ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಇದು ದೊಡ್ಡ ರಿಲೀಫ್ ಎಂದಿದ್ದಾರೆ.

ಮುಂದಿನ ವರ್ಷ ದ್ವಿತೀಯಾರ್ಧದಲ್ಲಿ ಬರಲಿದೆ ಜಿಯೋ 5G!

LEAVE A REPLY

Please enter your comment!
Please enter your name here