“ಶೀಘ್ರದಲ್ಲೇ ಎಸ್.ಎಸ್.ಎಲ್.ಸಿ, ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ” : ಸಚಿವ ಸುರೇಶ್ ಕುಮಾರ್

0
135
Tap to know MORE!

ಬೆಂಗಳೂರು: ಈ ವರ್ಷ 1ರಿಂದ 8ನೇ ತರಗತಿವರೆಗೆ ಶೈಕ್ಷಣಿಕ ವರ್ಷ ಇರಲ್ಲ. ಆದರೆ ಬೋರ್ಡ್ ಎಕ್ಸಾಂ ಇರುವುದರಿಂದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ದಿನಾಂಕಗಳನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು. ಇದರಿಂದ ವಿದ್ಯಾರ್ಥಿಗಳಲ್ಲೂ ಓದುವ ಉತ್ಸಾಹ ಬರಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸೆಂಬರ್ ಅಂತ್ಯದವರೆಗೂ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳು ತೆರೆಯುವುದಿಲ್ಲ. ಡಿಸೆಂಬರ್ ನಂತರ ಮತ್ತೊಮ್ಮೆ ಸಭೆ ನಡೆಸಿ ಚರ್ಚಿಸಲಾಗುವುದು. ಈ ವರ್ಷ 1-8ನೇ ತರಗತಿವರೆಗೆ ಶಾಲೆ ತೆರೆಯುವ ಬಗ್ಗೆ ಯೋಚನೆಯೇ ಇಲ್ಲ. ಹಾಗಂತ ಝಿರೋ ಇಯರ್ ಎಂದು ಪರಿಗಣಿಸಲಾಗಲ್ಲ. ಬೇರೆ ಬೇರೆ ವಿಧಗಳಲ್ಲಿ ತರಗತಿಗಳು ನಡೆಯುತ್ತದೆ ಎಂದರು.

ಇದನ್ನೂ ಓದಿ: ಯುವಕರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿದೆ | ಆದರೂ ಮತ್ತೊಮ್ಮೆ ಕಾಲೇಜು ಬಂದ್ ಮಾಡುವ ಅಗತ್ಯತೆ : ಸಚಿವ ಡಾ| ಸುಧಾಕರ್

ಇನ್ನು ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಬೋರ್ಡ್ ಪರೀಕ್ಷೆ ಇರುವುದರಿಂದ ಪರೀಕ್ಷಾ ದಿನಾಂಕಗಳನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು. 10ನೇ ತರಗತಿಯಲ್ಲಿ 9,59,566 ಮಕ್ಕಳು ಪರೀಕ್ಷೆ ಬರೆಯುವವರಿದ್ದಾರೆ.ಇನ್ನು ದ್ವಿತೀಯ ಪಿಯುಸಿಯಲ್ಲಿ 5,70,126 ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ. ಹೀಗಾಗಿ ಮಕ್ಕಳಿಗೆ ಪ್ರೇರಣೆ, ಶಿಕ್ಷಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಪರೀಕ್ಷೆ ದಿನಾಂಕ ಪ್ರಕಟಿಸುತ್ತೇವೆ ಎಂದು ತಿಳಿಸಿದರು.

ಇದೇ ವೇಳೆ ಖಾಸಗಿ ಶಾಲೆಯವರು ಎರಡನೇ ಅವಧಿಯ ಶುಲ್ಕ ಪಡೆಯುವ ಬಗ್ಗೆ ಬೇಡಿಕೆ ಬಂದಿದ್ದು, ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಹೇಳಿದರು.

LEAVE A REPLY

Please enter your comment!
Please enter your name here