ಬೆಂಗಳೂರು: ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಗೆ ಕೇಂದ್ರ ಬದಲಾವಣೆ ಮಾಡಿಕೊಳ್ಳುವ ಅವಕಾಶ ನೀಡಿದ್ದ ಪಿಯು ಇಲಾಖೆ ಈಗ ಮೂಲ ಕೇಂದ್ರಗಳಿಗೆ ಹೋಗಿ ಬರೆಯಬೇಕೆಂದು ಹೇಳಿ ವಿದ್ಯಾರ್ಥಿಗಳಿಗೆ ಶಾಕ್ ನೀಡಿದೆ.
ಅಂತರ್ ಜಿಲ್ಲಾ ವ್ಯಾಪ್ತಿಯಲ್ಲಿ ಪರೀಕ್ಷಾ ಕೇಂದ್ರ ಬದಲಿಸಿಕೊಳ್ಳಲು ಬಯಸಿದ್ದ ಹಲವು ವಿದ್ಯಾರ್ಥಿಗಳಿಗೆ ತಾಂತ್ರಿಕ ಸಮಸ್ಯೆಯಿಂದ ಬದಲಾವಣೆ ಸಾಧ್ಯವಾಗಿಲ್ಲ. ಇಂತಹ ವಿದ್ಯಾರ್ಥಿಗಳು ಕೂಡ ಮೂಲ ಪರೀಕ್ಷಾ ಕೇಂದ್ರದಲ್ಲೇ ಪರೀಕ್ಷೆ ಬರೆಯಬೇಕು. ಇದರಿಂದ ಬೇರೆ ಬೇರೆ ಜಿಲ್ಲೆಗಳಿಗೆ ತೆರಳಿರುವ ವಿದ್ಯಾರ್ಥಿಗಳು ಮೂಲ ಕೇಂದ್ರಗಳಲ್ಲಿ ಪರೀಕ್ಷೆ ಎದುರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.