ಬೆಂಗಳೂರು, (ಸೆ.26) : ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ಮಸೂದೆಗಳನ್ನು ವಿರೋಧಿಸಿ ಸೆಪ್ಟೆಂಬರ್ 28ರಂದು ವಿವಿಧ ರೈತ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿವೆ.
ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 28ರಂದು ನಡೆಯಬೇಕಿದ್ದ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯನ್ನು ಮುಂದೂಡಲಾಗಿದೆ. ಅಂದು ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳು ಸೆ.29ರಂದು ನಡೆಯಲಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಇಂದು (ಶನಿವಾರ) ಸುತ್ತೋಲೆ ಹೊರಡಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ, ಸೆ. 28ರ ಬೆಳಿಗ್ಗೆ ವಿಜ್ಞಾನ, ರಾಜ್ಯಶಾಸ್ತ್ರ, ಮಧ್ಯಾಹ್ನ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ ಪರೀಕ್ಷೆಗಳನ್ನು ನಿಗದಿಪಡಿಸಲಾಗಿತ್ತು. ಆದರೆ ಅಂದು ಕರ್ನಾಟಕ ಬಂದ್ ಇರುವ ಹಿನ್ನಲೆಯಲ್ಲಿ, ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಪೂರಕ ಪರೀಕ್ಷೆಯನ್ನು ಮುಂದೂಡಲಾಗಿದೆ. ಇತರೆ ಪರೀಕ್ಷೆಗಳು ನಿಗದಿಯಂತೆ ನಡೆಯಲಿದೆ ಎಂದು ತಿಳಿಸಿದೆ.