ದೇಶವಿರೋಧಿ, ಪ್ರಚೋದನಕಾರಿ ಚಟುವಟಿಕೆಗಳಲ್ಲಿ ತೊಡಗಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಮಂಗಳೂರು ನಗರ ಪೊಲೀಸ್ ಆಯುಕ್ತ

0
146
Tap to know MORE!

ಮಂಗಳೂರು : ಮಂಗಳೂರಿನ ಎರಡು ಕಡೆ ಗೋಡೆ ಮೇಲೆ ಪ್ರಚೋದನಕಾರಿ ಬರವಣಿಗೆ ಕಂಡುಬಂದಿದೆ. ಇಂತಹ ಚಟುವಟಿಕೆಗಳಲ್ಲಿ ತೊಡಗಿಕೊಂಡವರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ‌ಕುಮಾರ್ ತಿಳಿಸಿದ್ದಾರೆ.

ಪ್ರಕರಣಗಳಿಗೆ ಸಂಬಂಧಿಸಿದಂತೆ ಆಯಾ ಠಾಣೆಗಳಲ್ಲಿ ಕೇಸು ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತ ದೃಷ್ಟಿಯಿಂದ ಇಂತಹ ಅಪರಾಧಗಳನ್ನು ತಡೆಗಟ್ಟುವುದು ಅತಿ ಅವಶ್ಯಕ. ಇಂತಹ ಚಟುವಟಿಕೆಗಳಲ್ಲಿ ತೊಡಗಿರುವ ಯಾವುದೇ ವ್ಯಕ್ತಿ ಅಥವಾ ಸಂಘಟನೆಗಳ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: ಮಂಗಳೂರು : “ಪ್ರವಾದಿಗೆ ಕೋಪ ಬಂದರೆ ದೇಹದಿಂದ ತಲೆ ಬೇರ್ಪಡುವುದು” – ಬೆಳಕಿಗೆ ಬಂತು ಮತ್ತೊಂದು “ಉಗ್ರ” ಬರಹ

ಯಾರಾದರೂ ಇಂತಹ ಚಟುವಟಿಕೆಗಳಲ್ಲಿ ತೊಡಗಿರುವ ಬಗ್ಗೆ ಮಾಹಿತಿ ಲಭ್ಯವಿದ್ದಲ್ಲಿ ಸಾರ್ವಜನಿಕರು ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ (9480802304), ಅಪರಾಧ ಮತ್ತು ಸಂಚಾರ ಡಿಸಿಪಿ (9480802305), ನಗರ ನಿಯಂತ್ರಣ ಕೊಠಡಿ (0824- 2220800) ಅಥವಾ ಸಮೀಪದ ಪೊಲಿೀಸ್ ಠಾಣೆಗೆ ಮಾಹಿತಿ ನೀಡಬಹುದಾಗಿದೆ. ಮಾಹಿತಿ ನೀಡಿದ ವ್ಯಕ್ತಿಯ ವಿವರವನ್ನು ಗೌಪ್ಯವಾಗಿ ಇಡಲಾಗುವುದು ಎಂದು ಪೊಲೀಸ್ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here