ಪೊಲೀಸ್ ನಿರೀಕ್ಷಕರಿಗೆ ಜೀವ ಬೆದರಿಕೆ -ಬಾಲಾರೋಪಿ ಸೇರಿ ಇಬ್ಬರ ಬಂಧನ

0
192
Tap to know MORE!

ಮಂಗಳೂರು: ಪೊಲೀಸ್ ನಿರೀಕ್ಷಕರೋರ್ವರಿಗೆ ಜೀವ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಓರ್ವ ಬಾಲಾರೋಪಿ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ಮಹಮ್ಮದ್ ಶಾಫಿಕ್ ಹಾಗೂ ಮತ್ತೊಬ್ಬ 17ರ ಹರೆಯದ ಬಾಲಾರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಿಎಎ ಮತ್ತು ಎನ್ಆರ್ ಸಿ ಕಾಯ್ದೆ ವಿರೋಧಿ ಮಂಗಳೂರು ನಗರದಲ್ಲಿ ನಡೆದ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿಗಳು ಪೊಲೀಸ್ ನಿರೀಕ್ಷಕರಾದ ಶಾಂತರಾಮ್ ಅವರಿಗೆ ಕರೆ ಮಾಡಿ ಜೀವ ಬೆದರಿಕೆಯೊಡ್ಡಿದ್ದರು ಎಂದು ತಿಳಿದುಬಂದಿದೆ.

ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎನ್ನಲಾಗಿದ್ದು, ಈ ಬಗ್ಗೆ ಪೊಲೀಸ್ ನಿರೀಕ್ಷಕರು ಪ್ರಕರಣ ದಾಖಲಿಸಿದ್ದರು. ತನಿಖೆ ಆರಂಭಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದ ಹೆಚ್ಚಿನ ತನಿಖೆಗಾಗಿ ಸೈಬರ್ ಕ್ರೈಮ್ ಗೆ ವರ್ಗಾವಣೆ ಮಾಡಲಾಗಿದೆ.

LEAVE A REPLY

Please enter your comment!
Please enter your name here