ಪ್ರಜ್ಞೆ ತಪ್ಪಿ ಕುಸಿದು ಬಿದ್ದ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ

0
87
Tap to know MORE!

ಚಿತ್ರದುರ್ಗ:

ಜನವರಿ 03: ಕೇಂದ್ರ ಸಚಿವ ಡಿ. ವಿ ಸದಾನಂದ ಗೌಡ ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಜ್ಞೆ ತಪ್ಪಿ ಕಾರಿನಲ್ಲಿ ಕುಸಿದು ಬಿದ್ದ ಸದಾನಂದ ಗೌಡ ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಶಿವಮೊಗ್ಗದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ ನಂತರ ಚಿತ್ರದುರ್ಗದ ಬಿಜೆಪಿ ಮುಖಂಡ ನವೀನ್ ಮಾಲೀಕತ್ವದ ನವೀನ್ ರೆಸಿಡೆನ್ಸಿಗೆ ಭೇಟಿ ನೀಡಿದ ಕೇಂದ್ರ ಸಚಿವ ಡಿವಿ ಸದಾನಂದಗೌಡ ಅವರು ಪ್ರಜ್ಞೆ ತಪ್ಪಿದ ಘಟನೆ ನಡೆದಿದೆ. ವೈದ್ಯರಿಂದ ನೀಡಿದ ಮಾಹಿತಿ ಪ್ರಕಾರ, ಅವರ ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗಿ ಲೋ ಶುಗರ್ ಕಾರಣ ಕಣ್ಣು ಕತ್ತಲೆ ಕಟ್ಟಿ, ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ.

ಸದ್ಯಕ್ಕೆ ಚೇತರಿಸಿಕೊಂಡಿರುವ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಹಾಸ್ಟರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.

LEAVE A REPLY

Please enter your comment!
Please enter your name here